ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಅಬಕಾರಿ ನೀತಿ ಅಕ್ರಮ ಪ್ರಕರಣದಲ್ಲಿ ಇಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ Delhi CM Arwind Kejriwal ಅವರು ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ Supreme Court ಅಸ್ತು ಎಂದಿದೆ.
ಈ ಕುರಿತಂತೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಮನವಿಯನ್ನು ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠದ ಮುಂದೆ ಇಂದು ವಿಚಾರಣೆಗೆ ನಿಯೋಜಿಸಿದ್ದಾರೆ.
ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಅವರ ನಿವಾಸದಲ್ಲಿ ಬಂಧಿಸುವುದರ ವಿರುದ್ಧ ಮಾಡಿದ ಮನವಿಯನ್ನು ಪ್ರಸ್ತಾಪಿಸಿದರು.
Also read: ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ ಗೌಡ ಬಂಧನ | ಕಾರಣವೇನು?
ಅಬಕಾರಿ ನೀತಿಗೆ ಸಂಬಂಧಿಸಿದಂತೆ ನವದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post