ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ವಿರುದ್ಧ ಸುಪ್ರೀಂ ಕೋರ್ಟ್ Supreme Court ಮಹತ್ವದ ತೀರ್ಪು ನೀಡಿದ್ದು, ಚುನಾವಣಾ ಆಯೋಗದ ಅಧಿಕಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ನ್ಯಾಯಪೀಠ ತಳ್ಳಿಹಾಕಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠ, ಚುನಾವಣಾ ಆಯೋಗಕ್ಕೆ Election Commission ಈ ರೀತಿಯ SIR ನಡೆಸುವ ಸಂಪೂರ್ಣ ಅಧಿಕಾರವಿದೆ ಎಂದು ಸ್ಪಷ್ಟಪಡಿಸುವ ಮೂಲಕ SIR ವಿರುದ್ಧ ಏರ್ಪಟ್ಟಿದ್ದ ರಾಜಕೀಯ ಹಾಗೂ ಕಾನೂನು ಹೋರಾಟಕ್ಕೆ ಸುಪ್ರೀಂ ಕೋರ್ಟ್ ತೆರೆ ಎಳೆದಿದೆ.
SIR ಕ್ರಮವು ಕಾನೂನುಬದ್ಧವಾಗಿದ್ದು, ಇದು ಸ್ವಚ್ಛ ಮತ್ತು ನ್ಯಾಯಸಮ್ಮತ ಚುನಾವಣೆಗೆ ಸಹಕಾರಿಯಾಗುತ್ತದೆ ಹಾಗೂ ಚುನಾವಣಾ ಆಯೋಗ ತನ್ನ ಅಧಿಕಾರ ವ್ಯಾಪ್ತಿ ಮೀರಿಲ್ಲ. ಬಿಹಾರ ಮತದಾರರ ಪಟ್ಟಿಯ SIR ಪ್ರಕ್ರಿಯೆ ಜನಪ್ರತಿನಿಧಿತ್ವ ಕಾಯ್ದೆ (RP Act) ಅಥವಾ ಸಂವಿಧಾನದ ಯಾವುದೇ ವಿಧಿಯನ್ನು ಉಲ್ಲಂಘಿಸಿಲ್ಲ ಎಂದು ಹೇಳಿದೆ.
Also read: ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ
“ಮತದಾರರ ಪಟ್ಟಿಯ ಶುದ್ಧತೆ ಕಾಪಾಡುವುದು ಹಾಗೂ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಖಚಿತಪಡಿಸುವ ಉದ್ದೇಶದಿಂದಲೇ ಈ ಕ್ರಮ ಕೈಗೊಳ್ಳಲಾಗಿದೆ. ಹೆಸರುಗಳನ್ನು ತೆಗೆದುಹಾಕುವ ಹಂತ ಹಂತದ ವಿಧಾನ, ಆಕ್ಷೇಪಣೆ ಸಲ್ಲಿಸಲು ಅವಕಾಶ ಹಾಗೂ ಇತರ ಭದ್ರತಾ ಕ್ರಮಗಳು ಈ ಪ್ರಕ್ರಿಯೆಯನ್ನು ನ್ಯಾಯಸಮ್ಮತ ಮತ್ತು ಏಕಪಕ್ಷೀಯವಲ್ಲದಂತಾಗಿಸುತ್ತವೆ ಎಂದು ತೀರ್ಪಿನಲ್ಲಿ, ಉಲ್ಲೇಖಿಸಿದೆ.
ಇದೇ ವೇಳೆ SIR ಪ್ರಕ್ರಿಯೆಯಲ್ಲಿ ಒಳಗೊಂಡಿರುವ ಸುರಕ್ಷತಾ ಕ್ರಮಗಳು ಮತದಾರರ ಪಟ್ಟಿಯ ಸಮಗ್ರತೆಯನ್ನು ಕಾಪಾಡಲು ಸಹಕಾರಿಯಾಗುತ್ತವೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.




















