ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಸಣ್ಣ ವ್ಯಾಪಾರಿಗಳಿಗೆ #Small Traders ಕರ್ನಾಟಕ ಸರ್ಕಾರ ನೀಡಿರುವ ತೆರಿಗೆ ನೋಟಿಸ್’ಗೂ #Tax Notice ನಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ #Pralhad Joshi ಪ್ರತಿಕ್ರಿಯೆ ನೀಡಿದ್ದು, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್ ಕೊಟ್ಟು, ಇದೀಗ ರಾಜ್ಯ ಸರ್ಕಾರಕ್ಕೂ ಹಾಗೂ ಜಿ ಎಸ್ ಟಿ ನೋಟಿಸ್ ಗೂ ಯಾವುದೇ ಸಂಬಂಧವಿಲ್ಲ ಅಂತ ಹೇಳುತ್ತಿರೋದು ನಿಜಕ್ಕೂ ಹಾಸ್ಯಾಸ್ಪದ ಎಂದು ಹೇಳಿದ್ದಾರೆ.

ಜಿ ಎಸ್ ಟಿ ಕೌನ್ಸಿಲ್ ನಲ್ಲಿ ಯಾವುದೇ ತೀರ್ಮಾನ ತಗೆದುಕೊಳ್ಳಲು ಮಹತ್ವದ ಪಾತ್ರ ವಹಿಸಿರುವುದು ರಾಜ್ಯ ಸರ್ಕಾರಗಳು. ಕೇಂದ್ರ ಸರ್ಕಾರಕ್ಕೆ ಕೇವಲ 3ನೇ ಒಂದು ಭಾಗ ಮಾತ್ರ ಅಧಿಕಾರವಿದೆ. ಉಳಿದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿದೆ. 3ನೇ ಎರಡು ಭಾಗದಷ್ಟು ಅಧಿಕಾರ ಹೊಂದಿರುವ ರಾಜ್ಯ ಸರ್ಕಾರಗಳ ನಿರ್ಣಯವೇ ಅಂತಿಮವಾಗಿರಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post