ಕಲ್ಪ ಮೀಡಿಯಾ ಹೌಸ್
ನವದೆಹಲಿ: ಆಫ್ಘಾನಿಸ್ತಾನದಲ್ಲಿ ಪ್ರಸ್ತುತ ನಡೆಯುತ್ತಿರುವ ಘಟನೆಗಳು ದೇಶದಲ್ಲಿ ಭದ್ರತಾ ಆತಂಕವನ್ನು ಸೃಷ್ಟಿಸುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಪಂಜಾಬ್ ವಿಶ್ವವಿದ್ಯಾಲಯ ಆಯೋಜಿಸಿದ್ದ ರಾಷ್ಟ್ರೀಯ ಭದ್ರತೆ ವಿಷಯದ ಕುರಿತು ಮೂರನೇ ಬಲರಾಮ್ಜಿ ದಾಸ್ ಟಂಡನ್ ಸ್ಮಾರಕ ಉಪನ್ಯಾಸ ಕಾರ್ಯಕ್ರಮವನ್ನುದ್ದೇಶಿ ಮಾತನಾಡಿದ ಅವರು, ಆಫ್ಘಾನಿಸ್ತಾನದಲ್ಲಿನ ಹಾಲಿ ಬೆಳವಣಿಗೆಗಳಿಂದ ದೇಶಕ್ಕೆ ಹೊಸ ಭದ್ರತಾ ಆಂತಕ ಎದುರಾಗಿದೆ ಮತ್ತು ಪ್ರಶ್ನೆಗಳನ್ನು ಹುಟ್ಟು ಹಾಕುತ್ತಿದೆ. ಆದರೆ ಕೇಂದ್ರ ಸರ್ಕಾರವು ಈ ಬಗ್ಗೆ ಎಚ್ಚರವಾಗಿರುತ್ತದೆ ಹಾಗೂ ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ನಮ್ಮ ಸೇನೆ ಸಮರ್ಥವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಫ್ಘಾನಿಸ್ತಾನದ ಬೆಳವಣಿಗೆಗಳ ಲಾಭವನ್ನು ಪಡೆದುಕೊಳ್ಳುವ ಮೂಲಕ ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸಲು ಯಾವುದೇ ದೇಶವಿರೋಧಿ ಶಕ್ತಿಗೆ ಅವಕಾಶ ನೀಡಬಾರದು. ನೆರೆಯ ಅಫ್ಘಾನಿಸ್ತಾನದಲ್ಲಿ ಏನಾಗುತ್ತಿದೆ ಎಂಬುದು ಭದ್ರತೆಯ ವಿಷಯದಲ್ಲಿ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ನಮ್ಮ ಸರ್ಕಾರ ಅಲ್ಲಿನ ಬೆಳವಣಿಗೆಗಳ ಮೇಲೆ ತೀವ್ರ ನಿಗಾ ಇಟ್ಟಿದೆ ಎಂದು ಹೇಳಿದರು.
ಭಾರತೀಯ ಪ್ರಜೆಗಳ ಭದ್ರತೆ ಜೊತೆಗೆ, ದೇಶವಿರೋಧಿ ಚಟುವಟಿಕೆ ನಡೆಸುವ ಗಡಿಯಾಚೆಗಿನ ಭಯೋತ್ಪಾದನೆಯನ್ನು ಅಲ್ಲಿನ ಅಭಿವೃದ್ಧಿಯ ಲಾಭ ಪಡೆಯುವ ಮೂಲಕ ಪ್ರೋತ್ಸಾಹಿಸಬಾರದು. ಹಾಗೂ ರಾಷ್ಟ್ರೀಯ ಭದ್ರತೆಯ ದೃಷ್ಟಿಕೋನದಿಂದ ಸವಾಲುಗಳಾಗುವ ಕೆಲವು ಹೆಚ್ಚಿನ ಆತಂಕಗಳಿವೆ. ಕೇಂದ್ರದಲ್ಲಿರುವ ಮೋದಿ ನೇತೃತ್ವದ ಸರ್ಕಾರವು ಯಾವುದೇ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಶಕ್ತವಾಗಿದೆ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post