ಕಲ್ಪ ಮೀಡಿಯಾ ಹೌಸ್
ನವದೆಹಲಿ: ಕೊರೋನಾ ವೈರಸ್ ಹರಡುವ ಭೀತಿಯ ನಡುವೆಯೂ ಪರೀಕ್ಷೆ ನಡೆಸಲು ಮುಂದಾಗಿರುವ ಆಂಧ್ರಪ್ರದೇಶ ಸರ್ಕಾರಕ್ಕೆ ಚಾಟಿ ಬೀಸಿರುವ ಸುಪ್ರೀಂ ಕೋರ್ಟ್, ಇದರಿಂದ ಒಂದೇ ಒಂದು ಸಾವು ಸಂಭವಿಸಿದರೆ ಅದಕ್ಕೆ ನಿಮ್ಮ ಸರ್ಕಾರವೇ ಹೊಣೆಯಾಗಿರುತ್ತದೆ ಎಂದು ಎಚ್ಚರಿಕೆ ನೀಡಿದೆ.
ಪರೀಕ್ಷೆ ನಡೆಸುವ ಸರ್ಕಾರದ ಕ್ರಮದ ವಿರುದ್ದ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಎಲ್ಲವನ್ನೂ ಅನಿಶ್ಚಿತ ಸ್ಥಿತಿಯಲ್ಲಿ ಇಡಲು ಸಾಧ್ಯವಾಗದು. 2 ದಿನದಲ್ಲಿ ಸರ್ಕಾರ ತನ್ನ ನಿರ್ಧಾರ ತಿಳಿಸಬೇಕು. ಒಂದು ವೇಳೆ ಪರೀಕ್ಷೆ ನಡೆಸಿ, ಅದರಿಂದ ಒಂದೇ ಒಂದು ಸಾವು ಸಂಭವಿಸಿದರೆ ಸರ್ಕಾರವನ್ನೇ ಹೊಣೆ ಮಾಡಬೇಕಾಗುತ್ತದೆ ಎಂದು ಹೇಳಿದೆ.
ಕೊರೋನಾ ಸೋಂಕು ಹರಡುವ ಹಿನ್ನೆಲೆಯಲ್ಲಿ ಸಿಬಿಎಸ್’ಇ, ಐಸಿಎಸ್’ಇ ಬೋರ್ಡ್ 10 ಮತ್ತು 12 ನೆಯ ತರಗತಿಯಹಾಗೂ 21 ರಾಜ್ಯಗಳು ಪರೀಕ್ಷೆಯನ್ನು ರದ್ದು ಗೊಳಿಸಿವೆ. ಆದರೆ, ಇಂತಹ ಸಂದರ್ಭದಲ್ಲಿ ಪರೀಕ್ಷೆ ನಡೆಸಲು ಮುಂದಾಗಿರುವ ಆಂಧ್ರಪ್ರದೇಶ ಸರ್ಕಾರದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಸುಪ್ರೀಂ ಸಹ ಗಂಭೀರ ಎಚ್ಚರಿಕೆ ನೀಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post