ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಬಹು ನಿರೀಕ್ಷಿತ ದೇಶದ ಜನಸಂಖ್ಯೆಯ ಅಧಿಕೃತ ಸಮೀಕ್ಷೆಯಾದ ಜನಗಣತಿಯನ್ನು 2025ರಲ್ಲಿ #Census 2025 ಆರಂಭಿಸುವ ಸಾಧ್ಯತೆಯಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಈ ಪ್ರಕ್ರಿಯೆಯು 2025ರಲ್ಲಿ ಆರಂಭಗೊಂಡು 2026ರವರೆಗೆ ಮುಂದುವರಿಯುವ ಸಂಭವವಿದೆ. ಜನಸಂಖ್ಯೆ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಆಗಲಿದ್ದು, ಈ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆ ನಡೆಯುತ್ತಿದೆ. ಆದರೆ ಇಲ್ಲಿಯವರೆಗೆ ಸರ್ಕಾರದಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.
Also read: ರಾಷ್ಟ್ರಕ್ಕೆ ಶೈಕ್ಷಣಿಕ ಸೇವೆ ನೀಡುವಲ್ಲಿ ಧಾರವಾಡದ ಪಾತ್ರ ಅನನ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
2021ರಲ್ಲಿ ಜನಗಣತಿ ನಡೆಯಬೇಕಿತ್ತು. ಆದರೆ ಕೋವಿಡ್ #Covid ಕಾರಣದಿಂದ ಮುಂದೂಡಿಕೆಯಾಗಿದೆ. ಲೋಕಸಭಾ ಪುನರ್ ವಿಂಗಡನೆಯೊಂದಿಗೆ ಮಹಿಳಾ ಮೀಸಲಾತಿ ಸಹ ಜಾರಿಗೆ ಬರಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post