ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಭಾರತದ ಮೇಲಿನ ನಿಯಂತ್ರಣದ ಸಮಯ ಮುಗಿದಿದೆ. ಇದು ನವ ಭಾರತ. #NewIndia ನಾವು ನಮ್ಮ ಜನರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಬೇರೆ ಯಾವುದಕ್ಕಿಂತ ಹೆಚ್ಚಾಗಿ ಕಾಳಜಿ ವಹಿಸುತ್ತೇವೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ #Jai Shankar ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಭಾರತೀಯ ನಾಗರಿಕರು ದಾಳಿಗೆ ಒಳಗಾಗುತ್ತಿರುವ ಸಮಯದಲ್ಲಿ, ದಾಳಿಯ ರೂವಾರಿ ಪಾಕಿಸ್ತಾನಕ್ಕೆ ಐಎಂಎಫ್ #IMF ಆರ್ಥಿಕ ನೆರವು ನೀಡಿದ್ದು, ಈ ಮೂಲಕ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಒದಗಿಸಿದೆ. ಇದೀಗ ತನ್ನ ರಕ್ಷಣೆಗೆ ಮುಂದಾಗಿರುವ ಭಾರತವನ್ನು ಸುಮ್ಮನಿರಲು ಆದೇಶಿಸುತ್ತಿದೆ. ಭಾರತದ ಏಕತೆ-ಸೌಹಾರ್ಧತೆ ಮತ್ತು ಆಂತರಿಕ ರಕ್ಷಣೆಯ ವಿಚಾರಕ್ಕೆ ಬಂದರೆ ಯಾರ ಮಾತೂ ಕೇಳುವುದಿಲ್ಲ ಎಂದು ಭಾರತ G7 ನಾಯಕರಿಗೆ #G7 Leader ದಿಟ್ಟ ಉತ್ತರ ನೀಡಿದ್ದಾರೆ.

ಇನ್ನು ಭಾರತ ಮತ್ತು ಪಾಕಿಸ್ತಾನ ನಡುವೆ ಭುಗಿಲೆದ್ದಿರುವ ಸೇನಾ ಸಂಘರ್ಷ ವಿಚಾರವಾಗಿ ಇತ್ತೀಚೆಗೆ G7 ದೇಶಗಳ ವಿದೇಶಾಂಗ ಮಂತ್ರಿಗಳ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಯುನೈಟೆಡ್ ಕಿಂಗ್‌ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದ G7 ವಿದೇಶಾಂಗ ಮಂತ್ರಿಗಳು ಮತ್ತು ಯುರೋಪಿಯನ್ ಒಕ್ಕೂಟದ ಉನ್ನತ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಮತ್ತಷ್ಟು ಮಿಲಿಟರಿ ಉಲ್ಬಣವು ಪ್ರಾದೇಶಿಕ ಸ್ಥಿರತೆಗೆ ಗಂಭೀರ ಬೆದರಿಕೆಯನ್ನು ಒಡ್ಡುತ್ತದೆ. ಎರಡೂ ಕಡೆಯ ನಾಗರಿಕರ ಸುರಕ್ಷತೆಯ ಬಗ್ಗೆ ನಾವು ತೀವ್ರ ಕಳವಳ ಹೊಂದಿದ್ದೇವೆ. ತಕ್ಷಣವೇ ಉದ್ವಿಗ್ನತೆಯನ್ನು ಕಡಿಮೆ ಮಾಡಲು ನಾವು ಕರೆ ನೀಡುತ್ತೇವೆ ಎಂದಿದ್ದರು.
ಅಲ್ಲದೆ ಶಾಂತಿಯುತ ಫಲಿತಾಂಶಕ್ಕಾಗಿ ಎರಡೂ ದೇಶಗಳು ನೇರ ಸಂವಾದದಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುತ್ತೇವೆ. ನಾವು ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸುವುದನ್ನು ಮುಂದುವರಿಸುತ್ತೇವೆ ಮತ್ತು ತ್ವರಿತ ಮತ್ತು ಶಾಶ್ವತ ರಾಜತಾಂತ್ರಿಕ ನಿರ್ಣಯಕ್ಕಾಗಿ ನಮ್ಮ ಬೆಂಬಲವನ್ನು ವ್ಯಕ್ತಪಡಿಸುತ್ತೇವೆ ಎಂದು ಜಂಟಿ ಹೇಳಿಕೆ ನೀಡಿತ್ತು.
ಇದೀಗ ಇದೇ ಬೆಳವಣಿಗೆ ವಿರುದ್ಧ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಕಿಡಿಕಾರಿದ್ದು, ಉಭಯ ದೇಶಗಳ ನಡುವೆ ಸಂಯಮ ಕೋರುವ ಪಾಶ್ಚಿಮಾತ್ಯ ದೇಶಗಳು ಪಾಕಿಸ್ತಾನಕ್ಕೆ ಐಎಂಎಫ್ ಆರ್ಥಿಕ ನೆರವು ನೀಡದಂತೆ ಏಕೆ ತಡೆಯಲಿಲ್ಲ ಎಂದು ಪರೋಕ್ಷವಾಗಿ ಪ್ರಶ್ನಿಸಿದ್ದಾರೆ. ಅಲ್ಲದೆ ಈ ಹಣವನ್ನು ಪಾಕಿಸ್ತಾನ ಖಂಡಿತಾ ಭಾರತದ ವಿರುದ್ಧವೇ ಬಳಸುತ್ತದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post