ಕಲ್ಪ ಮೀಡಿಯಾ ಹೌಸ್ | ನವದೆಹಲಿ |
‘ಒಂದು ದೇಶ, ಒಂದು ಚುನಾವಣೆ’ #One Nation One Election ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ದೊರಕಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ #PM Narendra Modi ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ #Union Cabinet Meeting ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಒಪ್ಪಿಗೆ ನೀಡಿದೆ.
ಲೋಕಸಭೆ #Loksbha ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಇದರ ಉದ್ದೇಶವಾಗಿದೆ. ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ವರದಿ ಸಲ್ಲಿಸಲು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿತ್ತು.
Also read: ಫಲ ನೀಡದ ರಕ್ಷಣಾ ಕಾರ್ಯಾಚರಣೆ | ಕೊಳವೆ ಬಾವಿಗೆ ಬಿದ್ದಿದ್ದ ಮಗು ಸಾವು

ಪ್ರಸ್ತುತ ನಡೆಯುತ್ತಿರುವ ಸಂಸತ್ ಚಳಿಗಾಲದ ಅಧಿವೇಶನದಲ್ಲೇ ಕೇಂದ್ರ ಸರ್ಕಾರ ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post