ಕಲ್ಪ ಮೀಡಿಯಾ ಹೌಸ್ | ನವದೆಹಲಿ/ವಾರಣಾಸಿ |
ಪ್ರಧಾನಿ ನರೇಂದ್ರ ಮೋದಿ #PM Narendra Modi ಅವರು ಮೂರನೇ ಬಾರಿ ಉತ್ತರ ಪ್ರದೇಶದ ವಾರಣಾಸಿಯಿಂದ ಲೋಕಸಭಾ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಿದ್ದು ತಮ್ಮ ಒಟ್ಟು ಆಸ್ತಿಯನ್ನು ಅಫಿಡವಿಟ್ ಮೂಲಕ ಘೋಷಣೆ ಮಾಡಿಕೊಂಡಿದ್ದಾರೆ.
ಪ್ರಧಾನಿಯವರು ಒಟ್ಟು 3.02 ಕೋಟಿ ರೂ. ಮೌಲ್ಯದ ಚರಾಸ್ತಿಯನ್ನು ಘೋಷಣೆ ಮಾಡಿಕೊಂಡಿಕೊಂಡಿದ್ದು, ಅವರು 52,920 ರೂಪಾಯಿ ನಗದು ಹೊಂದಿದ್ದಾರೆ.
ಪ್ರಧಾನಿಯವರು ಜಮೀನು, ಮನೆ, ಕಾರು ಹೊಂದಿಲ್ಲ. ಅಲ್ಲದೇ ಯಾವುದೇ ಕಂಪನಿಯಲ್ಲಿ ಷೇರು ಖರೀದಿಸಿಲ್ಲ, ಮ್ಯೂಚುವಲ್ ಫಂಡ್’ನಲ್ಲಿ ಹೂಡಿಕೆ ಮಾಡಿಲ್ಲ.
Also read: ಯಕಶ್ಚಿತ್ `ಕುರ್ಕುರೆ’ಗಾಗಿ ಗಂಡನಿಗೆ ಡೈವೋರ್ಸ್ ಕೊಟ್ಟ ಪತ್ನಿ | ಘಟನೆ ನಡೆದಿದ್ದೆಲ್ಲಿ?
2018-19 ರಲ್ಲಿ 11,14,230 ರೂ. ಆದಾಯವಿದ್ದರೆ 2022-23 ರಲ್ಲಿ ಇದು 23,56,080 ರೂ.ಗೆ ಏರಿಕೆಯಾಗಿದೆ ಎಂದು ಘೋಷಣೆ ಮಾಡಿದ್ದಾರೆ.
ಪ್ರಧಾನಿ ಮೋದಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಎರಡು ಖಾತೆಗಳನ್ನು ಹೊಂದಿದ್ದಾರೆ.
ಎಸ್’ಬಿಐನಲ್ಲಿ 2,85,60,338 ರೂಪಾಯಿ ಮೌಲ್ಯದ ಫಿಕ್ಸೆಡ್ ಡೆಪಾಸಿಟ್ ಇಟ್ಟಿರುವ ಪ್ರಧಾನಿಯವರ ಬಳಿ 2,67,750 ರೂ. ಮೌಲ್ಯದ ನಾಲ್ಕು ಚಿನ್ನದ ಉಂಗುರಗಳಿವೆ.
ಗಾಂಧಿನಗರ ಎಸ್’ಬಿಐನ ಶಾಖೆಯಲ್ಲಿ 73,304 ರೂ. ಹಾಗೂ ವಾರಣಾಸಿ ಎಸ್’ಬಿಐ ಶಾಖೆಯಲ್ಲಿ ಕೇವಲ 7,000 ರೂ ಠೇವಣಿ ಇರಿಸಿದ್ದಾರೆ.
ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್’ನಲ್ಲಿ 9,12,398 ರೂ. ಇದೆ ಎಂದು ಘೋಷಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news























