ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಸಂಸತ್ತಿನಲ್ಲಿ ‘ಚಕ್ರವ್ಯೂಹ’ದ ಹೇಳಿಕೆ ನೀಡಿದ ನಂತರ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ ದಾಳಿ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ #Rahul Gandhi ಅವರು ಹೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನಾನು ಇಡಿ ಅಧಿಕಾರಿಗಳನ್ನು #ED Officers ಕೈಬೀಸಿ ಸ್ವಾಗತಿಸಲು ಸಿದ್ಧನಾಗಿದ್ದೇನೆ. ನಾನು ಚಹಾ ಮತ್ತು ಬಿಸ್ಕತ್ ಇಟ್ಟುಕೊಂಡು ತೆರೆದ ತೋಳುಗಳೊಂದಿಗೆ ಇಡಿಯನ್ನು ಸ್ವಾಗತಿಸಲು ಕಾಯುತ್ತಿದ್ದೇನೆ ಎಂದುರು ಹೇಳಿದ್ದಾರೆ.
Also read: ಬಿಹಾರ | ಸಿಡಿಲು ಬಡಿದು 15 ಮಂದಿ ಸಾವು | ಭಾರೀ ಮಳೆ ಸಾಧ್ಯತೆ
ಸ್ಪಷ್ಟವಾಗಿ ಹೇಳುತ್ತೇನೆ, ಇಬ್ಬರಲ್ಲಿ ಒಬ್ಬರಿಗೆ ನನ್ನ ಚಕ್ರವ್ಯೂಹದ ಭಾಷಣ ಇಷ್ಟವಾಗಿಲ್ಲ. ನನ್ನ ವಿರುದ್ಧ ಇಡಿ ದಾಳಿ ನಡೆಸಲು ಯೋಜಿಸಲಾಗುತ್ತಿದೆ ಎಂದು ಇಡಿ ‘ಒಳಗಿನವರೇ’ ನನಗೆ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ಕಳೆದ ಸೋಮವಾರ ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ಕುರುಕ್ಷೇತ್ರದಲ್ಲಿ ಅಭಿಮನ್ಯುವನ್ನು ಮಣಿಸಲು ಕೌರವರು ‘ಚಕ್ರವ್ಯೂಹ’ ನಿರ್ಮಿಸಿದ ಹಾಗೆ ಬಿಜೆಪಿಯು ದೇಶದಲ್ಲಿ ರೈತರು ಮತ್ತು ಯುವಕರ ಸುತ್ತ ‘ಚಕ್ರವ್ಯೂಹ’ ನಿರ್ಮಿಸುವ ಮೂಲಕ ದೇಶದಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದಾರೆ ಎಂದು ಟೀಕಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post