ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕ ರಾಜ್ಯಕ್ಕೆ ಅಕ್ಕಿ ಕೊಡಲು ಕೇಂದ್ರ ಸರ್ಕಾರ ಸಿದ್ದವಿದೆ ಎಂದು ಆಹಾರ ಸಚಿವ ಪ್ರಹ್ಲಾದ್ ಜೋಶಿ ಘೋಷಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಕರ್ನಾಟಕ ಸರ್ಕಾರದಿಂದ ಮನವಿ ಬಂದರೆ ಅಕ್ಕಿ ಕೊಡಲು ಕೇಂದ್ರ ಸರ್ಕಾರ ಸಿದ್ದವಿದೆ. ಪ್ರತಿ ಕೆಜಿಗೆ 28 ರೂ.ನಂತೆ ನಾವು ಅಕ್ಕಿ ಕೊಡಲು ಸಿದ್ದರಿದ್ದೇವೆ. ರಾಜ್ಯಕ್ಕೆ ಎಷ್ಟು ಅಗತ್ಯವಿದೆಯೋ ಅಷ್ಟು ಮನವಿ ಸಲ್ಲಿಸಲಿ. ಪೂರೈಕೆ ಮಾಡುತ್ತೇವೆ ಎಂದಿದ್ದಾರೆ.
Also read: ಇಡಿ ಅಧಿಕಾರಿಗಳನ್ನು ಸ್ವಾಗತಿಸಲು ಕಾಯುತ್ತಿದ್ದೇನೆ: ವಿಪಕ್ಷ ನಾಯಕ ರಾಹುಲ್ ಗಾಂಧಿ
ಈ ಹಿಂದೆ ರಾಜ್ಯಕ್ಕೆ ಅಕ್ಕಿ ಕೊಡಲು ಕೇಂದ್ರ ಸರ್ಕಾರ ನಿರಾಕರಿಸಿತ್ತು. ಕರ್ನಾಟಕ ಕೇಳಿದಷ್ಟು ಅಕ್ಕಿ ಪೂರೈಕೆ ಮಾಡಿದರೆ ತುರ್ತು ಸಂದರ್ಭದಲ್ಲಿ ವಿತರಣೆ ಮಾಡಲು ಕಷ್ಟವಾಗುತ್ತದೆ ಎಂದು ವಾದಿಸಿತ್ತು. ಆದರೆ, ಈಗ ರಾಜ್ಯಕ್ಕೆ ಕೊಡಲು ಕೇಂದ್ರ ಒಪ್ಪಿದೆ. ಬಡವರ ಅಕ್ಕಿ ವಿಚಾರದಲ್ಲೂ ರಾಜಕೀಯ ಮಾಡುತ್ತಿದೆ ಎಂಬ ನಿರಂತರ ಆರೋಪ ಈ ಹಿಂದೆ ಕೇಳಿಬಂದಿತ್ತು. ಇದೀಗ ಕೇಂದ್ರದಿಂದ ಅಕ್ಕಿ ದೊರೆತರೆ ರಾಜ್ಯ ಸರ್ಕಾರವು ಫಲಾನುಭವಿಗಳಿಗೆ ಅಕ್ಕಿಯನ್ನೇ ವಿತರಿಸಬಹುದಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















