ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ #Nirmala sitaraman ಅವರು 2024-25-೨೫ನೇ ಹಣಕಾಸು ವರ್ಷದ ಮೋದಿ 3.0 ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡುತ್ತಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ದೇಶದ ಆಯವ್ಯಯ ಮಂಡನೆ ಮಾಡಿದರು.
ಸತತ 7ನೇ ಬಾರಿಗೆ ಬಜೆಟ್ ಮಂಡನೆ ಮಂಡನೆ ಮಾಡಿದ ನಿರ್ಮಲಾ ಸೀತಾರಾಮನ್ ಜನರು ಮೋದಿ #Modi ನೇತೃತ್ವದ ಸರ್ಕಾರಕ್ಕೆ ಮೂರನೇ ಬಾರಿ ಆಶೀರ್ವಾದ ಮಾಡಿದ್ದಾರೆ. ನಾವು ಅವರಿಗೆ ಆಭಾರಿಯಾಗಿದ್ದೇವೆ. ಅದೇ ರೀತಿ ಮೂರನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾಗಿರುವ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದರು.
ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ 1.52 ಲಕ್ಷ ಕೋಟಿ ರೂ. ಘೋಷಣೆ ಮಾಡಲಾಗಿದೆ. ಈ ನಿಧಿಯಿಂದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ನಿರ್ಮಲಾ ತಿಳಿಸಿದ್ದಾರೆ.
Also read: ಕೇಂದ್ರ ಬಜೆಟ್: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ಗೆ ರಾಷ್ಟ್ರಪತಿ ಮುರ್ಮು ಶುಭಹಾರೈಕೆ
ಭಾರತದ ಆರ್ಥಿಕತೆ ವೃದ್ಧಿಯಾಗಿದೆ, ಹಣದುಬ್ಬರ ನಿಯಂತ್ರಣದಲ್ಲಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ 5 ವರ್ಷ ವಿಸ್ತರಣೆ ಹಾಗೂ ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48 ಲಕ್ಷ ಕೋಟಿ ಮೀಸಲಿಟ್ಟಿದ್ದು, ಉದ್ಯೋಗ, ಕೌಶಲ್ಯವೃದ್ಧಿ, ಆರ್ಥಿಕತೆ ಬೆಳವಣಿಗೆಗೆ ಪೂರಕ ಬಜೆಟ್ ಇದಾಗಿರಲಿದೆ ಎಂದರು.
ಮುಂದಿನ ಒಂದು ವರ್ಷದಲ್ಲಿ 1 ಕೋಟಿ ರೈತರನ್ನು ನೈಸರ್ಗಿಕ ಕೃಷಿ ವ್ಯಾಪ್ತಿಗೆ ತರಲಾಗುವುದು. ಸಾಮಾಜಿಕ ನ್ಯಾಯ, ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ವಿಕಸಿತ ಭಾರತಕ್ಕಾಗಿ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದ್ದು, ಸೂಕ್ಷ್ಮ, ಸಣ್ಣ & ಮಧ್ಯಮ ಕೈಗಾರಿಕೆಗಳಿಗೆ ಈ ಬಜೆಟ್ ಪೂರಕವಾಗಿದೆ ಎಂದು ನಿರ್ಮಲಾ ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post