ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ #ICC ಮೇಲೆ ಮತ್ತೆ ಭಾರತ ಪ್ರಾಬಲ್ಯ ಸಾಧಿಸಿದ್ದು, BCCI ಕಾರ್ಯದರ್ಶಿ ಜಯ್ ಶಾ #Jai Shah ಐಸಿಸಿ ಚುಕ್ಕಾಣಿ ಹಿಡಿಯುವತ್ತ ದಾಪುಗಾಲಿರಿಸಿದ್ದಾರೆ.
ಸ್ತುತ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರ ಅವಧಿಯು ಈ ವರ್ಷ ನವೆಂಬರ್ 30 ರಂದು ಕೊನೆಗೊಳ್ಳಲಿದ್ದು, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮುಂದಿನ ಐಸಿಸಿ ಅಧ್ಯಕ್ಷರಾಗುವ ಸಾಧ್ಯತೆ ಇದೆ.
Also read: ಭಾರತದಿಂದ ಜಪಾನ್ ಗೆ ಹಸಿರು ಅಮೋನಿಯಾ ರಫ್ತು | ಉಭಯ ರಾಷ್ಟ್ರಗಳು ಒಪ್ಪಂದಕ್ಕೆ ಸಹಿ
ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾದ ಆಗಸ್ಟ್ 27 ರೊಳಗೆ ಜಯ್ ಶಾ ಅವರು ತಮ್ಮ ಹಕ್ಕು ಚಲಾಯಿಸಲಿದ್ದಾರೆ ಎಂದು ಹೇಳಲಾಗಿದೆ. ಐಸಿಸಿ ಅಧ್ಯಕ್ಷರು ತಲಾ ಎರಡು ವರ್ಷಗಳ ಮೂರು ಅವಧಿಗೆ ಸ್ಪರ್ಧಿಸಬಹುದು. ನ್ಯೂಜಿಲೆಂಡ್‌ನ ಬಾರ್ಕ್ಲೇಸ್ ಇಲ್ಲಿಯವರೆಗೆ ನಾಲ್ಕು ವರ್ಷಗಳನ್ನು ಪೂರೈಸಿದ್ದಾರೆ.
“ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರು ಮೂರನೇ ಅವಧಿಗೆ ಸ್ಪರ್ಧಿಸಲು ಬಯಸುವುದಿಲ್ಲ ಎಂದು ಮಂಡಳಿಗೆ ದೃಢಪಡಿಸಿದ್ದಾರೆ. ನವೆಂಬರ್ ಅಂತ್ಯಕ್ಕೆ ಅವರ ಅವಧಿ ಮುಕ್ತಾಯವಾದಾಗ ಅವರು ಕೆಳಗಿಳಿಯಲಿದ್ದಾರೆ. ಈ ಸುದ್ದಿ ಬೆನ್ನಲ್ಲೇ ಐಸಿಸಿ ಮೇಲೆ ಅಧಿಕಾರದ ಚುಕ್ಕಾಣಿ ಮೇಲೆ ಕಣ್ಣಿಟ್ಟಿದ್ದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಕಾರ್ಯದರ್ಶಿ ಐಸಿಸಿ ಅಧ್ಯಕ್ಷರಾಗುವ ಹಾದಿ ಸುಗಮವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post