ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 1.25 ಲಕ್ಷ ಕೋಟಿ ರೂ. ಕಪ್ಪು ಹಣವನ್ನು ವಶಪಡಿಸಿಕೊಂಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ Railway Minister Ashwini Vaishnav ಹೇಳಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 4,300 ಕೋಟಿ ರೂ. ಮೌಲ್ಯದ ಬೇನಾಮಿ ಆಸ್ತಿಯನ್ನೂ ವಶಪಡಿಸಿಕೊಳ್ಳಲಾಗಿದೆ. ಸರ್ಕಾರದ ಪಾರದರ್ಶಕತೆ ನೀತಿಯ ಪ್ರತೀಕವಾಗಿದೆ. 4,300 ಕೋಟಿ ರೂ. ಬೇನಾಮಿ ಆಸ್ತಿ ವಶಪಡಿಸಿಕೊಳ್ಳಲಾಗಿದ್ದು, 1.75 ಲಕ್ಷ ಕಂಪನಿಗಳ ನೋಂದಣಿ ರದ್ದು ಮಾಡಲಾಗಿದೆ. 1.25 ಲಕ್ಷ ಕೋಟಿ ರೂ ಮೌಲ್ಯದ ಕಪ್ಪು ಹಣ ಜಪ್ತಿ ಮಾಡಲಾಗಿದೆ ಎಂದರು.
Also read: ಮುರುಘಾಮಠದ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿಎಸ್ ವಸ್ತ್ರದ್ ನೇಮಕ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post