ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ನೂತನ ಸಂಸತ್ ಭವನ New Parliament ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖ ಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ತಿಳಿಸಿದೆ.
75 ರೂ. ವಿಶೇಷ ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ ಇರಲಿದ್ದು, ಅದರ ಕೆಳಗಡೆ ಮುಖಬೆಲೆಯನ್ನು ತೋರಿಸುವ ರೂ. ಚಿಹ್ನೆಯೊಂದಿಗೆ 75 ಎಂದು ಇಂಗ್ಲಿಷ್ ಅಂಕೆಯಲ್ಲಿ ಹಾಗೂ ‘ಸತ್ಯಮೇವ ಜಯತೆ’ ಎಂದು ಬರೆಯಲಾಗುತ್ತದೆ. ಎಡಭಾಗದಲ್ಲಿ ‘ಭಾರತ್’ ಎಂದು ದೇವನಾಗರಿ ಲಿಪಿ ಹಾಗೂ ಬಲ ಭಾಗದಲ್ಲಿ ‘ಇಂಡಿಯಾ’ ಎಂದು ಇಂಗ್ಲಿಷ್‌ನಲ್ಲಿ ನಮೂದಿಸಲಾಗುವುದು ಎಂದು ತಿಳಿಸಿದೆ.
ನಾಣ್ಯದ ಇನ್ನೊಂದು ಬದಿಯಲ್ಲಿ ನೂತನ ಸಂಸತ್ತಿನ ಸಂಕೀರ್ಣದ ಚಿತ್ರವನ್ನು ಹೊಂದಿರಲಿದೆ. ‘ಸಂಸದ್ ಸಂಕುಲ್’ ಎಂದು ಅದರ ಮೇಲ್ಭಾಗದಲ್ಲಿ ದೇವನಾಗರಿ ಲಿಪಿಯಲ್ಲಿ ಹಾಗೂ ‘ಪಾರ್ಲಿಮೆಂಟ್ ಕಾಂಪ್ಲೆಕ್ಸ್’ ಎಂದು ಇಂಗ್ಲಿಷ್‌ನಲ್ಲಿ ಅದರ ಕೆಳ ಭಾಗದಲ್ಲಿ ಬರೆಯಲಾಗುತ್ತದೆ.
Also read: ಬೋಗಿಗಳನ್ನೇ ಬಿಟ್ಟು ಹೋದ ಎಂಜಿನ್: ಭದ್ರಾವತಿಯಲ್ಲಿ ನಡೆದ ಘಟನೆ, ಇಷ್ಟಕ್ಕೂ ಏನಾಯಿತು?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post