ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಗುಜರಾತ್ ಭಯೋತ್ಪಾದಕ ನಿಗ್ರಹ ದಳ(ಎಟಿಎಸ್) ಮಾಜಿ ಐಐಟಿ ವಿದ್ಯಾರ್ಥಿಯನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ.
ಅಮಾನ್ ಸಕ್ಸೇನಾ(28 ) ಬಂಧಿತ ಯುವಕನಾಗಿದ್ದು, ಈತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆಯೊಡ್ಡಿ ಇ-ಮೇಲ್ ಮಾಡಿದ್ದ ಆರೋಪದಲ್ಲಿ ಉತ್ತರಪ್ರದೇಶದ ಬುದೌನ್ ಜಿಲ್ಲೆಯಲ್ಲಿರುವ ತಂದೆಯ ಮನೆಯಲ್ಲಿದ್ದ ಸಕ್ಸೇನಾನನ್ನು ಗುಜರಾತ್ ಎಟಿಎಸ್ ಅಧಿಕಾರಿಗಳು ಬಂಧಿಸಿದ್ದರು. ಪ್ರಧಾನಿ ಅವರಿಗೆ ಬೆದರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗುಜರಾತ್ ಮೂಲದ ಮಹಿಳೆ ಮತ್ತು ಆಕೆಯ ದೆಹಲಿ ಮೂಲದ ಗೆಳೆಯನ ವಿರುದ್ಧ ದೂರು ದಾಖಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Also read: ಮನೆಮನೆಗೆ ರಾಘವ ರಾಮಾಯಣ: ಧರ್ಮಭಾರತಿ ವಿಶೇಷ ಅಭಿಯಾನ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















