ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಆಧಾರ್ ಹಾಗೂ ಪ್ಯಾನ್ ಕಾರ್ಡ್ ಲಿಂಕ್ Adhar-Pan Card ಮಾಡುವ ಕೊನೆ ದಿನಾಂಕವನ್ನು 2023ರ ಜೂನ್ 30ರವರೆಗೂ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತಂತೆ ಕೇಂದ್ರ ಹಣಕಾಸು ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಮಾರ್ಚ್ 31ಕ್ಕೆ ಇದ್ದ ಕೊನೆ ದಿನಾಂಕವನ್ನು ಜೂನ್ 30ರವರೆಗೂ ವಿಸ್ತರಣೆ ಮಾಡಲಾಗಿದೆ. ಈ ಅವಧಿಯೊಳಗೆ ಸಾರ್ವಜನಿಕರು ತಮ್ಮ ಆಧಾರ ಕಾರ್ಡನ್ನು ಪ್ಯಾನ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಿಕೊಳ್ಳಬೇಕು. ತಪ್ಪಿದಲ್ಲಿ ಜುಲೈ 1ರಿಂದ ಇವು ನಿಷ್ಕ್ರಿಯಗೊಳ್ಳಲಿವೆ. ಆನಂತರ ಹೆಚ್ಚಿನ ದಂಡ ಪಾವತಿಸಿ 30 ದಿನಗಳೊಳಗೆ ಕಾರ್ಯಗತ ಮಾಡಿಕೊಳ್ಳಬಹುದಾಗಿದೆ ಎಂದು ತಿಳಿಸಲಾಗಿದೆ.
Also read: ಬದುಕನ್ನು ಉಡುಗೊರೆಯಾಗಿ ಸ್ವೀಕರಿಸಿ ಜೀವನ ಸಾರ್ಥಕಗೊಳಿಸಿಕೊಳ್ಳಿ: ಡಾ. ತಿಮ್ಮಪ್ಪ ಹೆಗಡೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post