ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ನಂತರ ಅಡುಗೆ ಎಣ್ಣೆ ದರದಲ್ಲಿ ಗಣನೀಯ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ದೇಶದ ಜನತೆಗೆ ದೀಪಾವಳಿ ಸಂದರ್ಭದಲ್ಲಿ ಮತ್ತೊಂದು ಸಿಹಿ ಸುದ್ದಿ ನೀಡಿದೆ.
ಪ್ರತೀ ಲೀಟರ್ ಅಡುಗೆ ಎಣ್ಣೆ ದರದಲ್ಲಿ ಬರೊಬ್ಬರಿ 20ರೂ. ಗಳವರೆಗೂ ಇಳಿಕೆಯಾಗಿದ್ದು, ಕಳೆದ ಒಂದು ವರ್ಷದಿಂದ ಅಡುಗೆ ತೈಲ ಬೆಲೆಯಲ್ಲಿ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಕಚ್ಚಾ ಪಾಮ್ ಆಯಿಲ್, ಕಚ್ಚಾ ಸೋಯಾಬೀನ್ ಎಣ್ಣೆ ಮತ್ತು ಕಚ್ಚಾ ಸೂರ್ಯಕಾಂತಿ ಎಣ್ಣೆಯ ಮೇಲಿನ ಮೂಲ ಸುಂಕವನ್ನು ಶೇ. 2.5 ರಿಂದ ಶೂನ್ಯಕ್ಕೆ ಕಡಿತಗೊಳಿಸಿದೆ.
ಈ ತೈಲಗಳ ಮೇಲಿನ ಕೃಷಿ-ಸೆಸ್ ಅನ್ನು ಕಚ್ಚಾ ಪಾಮ್ ಆಯಿಲ್ಗೆ ಶೇ.20ರಿಂದ ಶೇ.7.5ಕ್ಕೆ ಮತ್ತು ಕಚ್ಚಾ ಸೋಯಾಬೀನ್ ಎಣ್ಣೆ ಮತ್ತು ಕಚ್ಚಾ ಸೂರ್ಯಕಾಂತಿ ಎಣ್ಣೆಗೆ ಶೇ.5ಕ್ಕೆ ಇಳಿಸಲಾಗಿದೆ. ಇದರ ಪರಿಣಾಮವಾಗಿ, ಕಚ್ಚಾ ಪಾಮ್ ಆಯಿಲ್ಗೆ ಒಟ್ಟು ಸುಂಕವು ಶೇ.7.5 ಮತ್ತು ಕಚ್ಚಾ ಸೋಯಾಬೀನ್ ಎಣ್ಣೆ ಮತ್ತು ಕಚ್ಚಾ ಸೂರ್ಯಕಾಂತಿ ಎಣ್ಣೆಗೆ ಶೇ.5 ರಷ್ಟಿದೆ.
ಆರ್ಬಿಡಿ ಪಾಮೊಲಿನ್ ಎಣ್ಣೆ, ಸಂಸ್ಕರಿಸಿದ ಸೋಯಾಬೀನ್ ಮತ್ತು ಸಂಸ್ಕರಿಸಿದ ಸೂರ್ಯಕಾಂತಿ ಎಣ್ಣೆಯ ಮೇಲಿನ ಮೂಲ ಸುಂಕವನ್ನು ಈ ಹಿಂದಿನ ಶೇ.32.5ರಿಂದ ಶೇ.17ಕ್ಕೆ ಇಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post