ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ರಾಷ್ಟ್ರ ರಾಜಧಾನಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ Aravind Kejriwal ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸುವ ಸಾಧ್ಯತೆ ಎಂದು ಹೇಳಲಾಗಿದೆ.
ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಇಡಿ ED ಅಧಿಕಾರಿಗಳು ಕೇಜ್ರಿವಾಲ್ ಅವರಿಗೆ ಸಮನ್ಸ್ ಜಾರಿಗೊಳಿಸಿದ್ದರೂ ಅವರು ಹಾಜರಾಗಿಲ್ಲ. ಹೀಗಾಗಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಬಂಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

Also read: ಅಯೋಧ್ಯೆ ರಾಮಮಂದಿರ ಸ್ಫೋಟ ಬೆದರಿಕೆ | ಎಸ್’ಟಿಎಫ್’ನಿಂದ ಇಬ್ಬರು ಆರೋಪಿಗಳ ಬಂಧನ
ಈ ಕುರಿತಂತೆ ಎಎಪಿ ನಾಯಕ ಸಚಿವ ಅತಿಶಿ ಟ್ವೀಟ್ ಮಾಡಿದ್ದು, ತನಿಖಾ ಸಂಸ್ಥೆಯಿಂದ ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ನಡೆಯಲಿದೆ. ಇದಾದ ಕೆಲವೇ ಗಂಟೆಗಳಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೂ ಕೇಜ್ರಿವಾಲ್’ಗೆ ನ.2 ಹಾಗೂ ಡಿ.21 ರಂದು ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿಗೊಳಿಸಲಾಗಿತ್ತು.









Discussion about this post