ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಹಿಜಾಬ್ Hijab ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಲಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲಾ ಕಾಲೇಜಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ Minister B C Nagesh ಸ್ಪಷ್ಟಪಡಿಸಿದ್ದಾರೆ.
ಸುಪ್ರೀಂ ಕೋರ್ಟ್ ಇಂದು ವಿಭಿನ್ನ ಅಭಿಪ್ರಾಯ ವ್ಯಕ್ತಪಡಿಸಿ, ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ಸಚಿವರು ಮಾಧ್ಯಮಗಳ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಪ್ರಕರಣದಲ್ಲಿ ಇಬ್ಬರು ನ್ಯಾಯಾಧೀಶರು ವಿಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮೂವರು ಅಥವಾ ಅದಕ್ಕಿಂತಲೂ ಹೆಚ್ಚಿನ ನ್ಯಾಯಾಧೀಶರ ಪೀಠಕ್ಕೆ ವರ್ಗಾವಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ಅಂತಿಮ ತೀರ್ಪು ಬರುವವರೆಗೂ ಹೈಕೋರ್ಟ್ ಆದೇಶವೇ ಜಾರಿಯಲ್ಲಿ ಇರುತ್ತದೆ. ಹೀಗಾಗಿ, ಅಂತಿಮ ತೀರ್ಪು ಬರುವವರೆಗೂ ರಾಜ್ಯದಲ್ಲಿ ಯಥಾ ಸ್ಥಿತಿ ಕಾಯ್ದುಕೊಳ್ಳಲಿದ್ದು, ಇದರಂತೆ ಸದ್ಯಕ್ಕೆ ಶಾಲಾ ಕಾಲೇಜಿನಲ್ಲಿ ಹಿಜಾಬ್ ಹಾಗೂ ಬುರ್ಖಾ ಧರಿಸಿ ಬರುವಂತಿಲ್ಲ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post