ಕಲ್ಪ ಮೀಡಿಯಾ ಹೌಸ್ | ನವದೆಹಲಿ/ಬೆಂಗಳೂರು |
ರಾಜ್ಯದಲ್ಲಿ ‘ದರಬೀಜಾಸುರ’ ಸರಕಾರ ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ #H D Kumaraswamy ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ! ಜನರ ರಕ್ತ ಹೀರುತ್ತಿದೆ ಎಂದು ಕಿಡಿಕಾರಿದ್ದಾರೆ.
ರಾಜ್ಯ ಸರಕಾರ ದಿನಕ್ಕೊಂದು ಸುಳ್ಳು ಹೇಳುತ್ತಿದೆ. ತಿಂಗಳಿಗೊಂದು ದರ ಏರಿಕೆ ಮಾಡುತ್ತಿದೆ. ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರಕಾರದ ಆಡಳಿತದ ವೈಖರಿ ಇದು! ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Also read: ಕಾಡುವ ಕಥೆಗಳು… ಗುನುಗುವ ಗೀತೆಗಳು… ವಿನೂತನ ಕಾರ್ಯಕ್ರಮಕ್ಕೆ ಚಾಲನೆ
ದರ ಏರಿಕೆಗೆ #Price Hike ಪಂಚ ಗ್ಯಾರೆಂಟಿಯನ್ನು ನೆಪ ಮಾಡಿಕೊಂಡಿದೆ. ಆದರೆ ಸರ್ಕಾರದ ದುರುದ್ದೇಶ: ಜನರ ಲೂಟಿ ಮಾಡುವುದಷ್ಟೇ. ಭಾರತದ ಮೇಲೆ ಆಕ್ರಮಣ ನಡೆಸಿ ನಿರಂತರ ಲೂಟಿ ಮಾಡಿದ ಮಹಮ್ಮದ್ ಘಜ್ನಿ, ಮಹಮ್ಮದ್ ಘೋರಿ ಅವರಿಬ್ಬರೂ ನಾಚುವಂತೆ ಕನ್ನಡಿಗರ ಮೇಲೆ ರಾಜ್ಯ ಕಾಂಗ್ರೆಸ್ ಸರಕಾರ ದರ ಏರಿಕೆ ದಂಡಯಾತ್ರೆ ನಡೆಸುತ್ತಿದೆ ಎಂದು ಅವರು ಆರೋಪ ಮಾಡಿದ್ದಾರೆ.

ಇಷ್ಟು ಸಾಲದೆಂಬಂತೆ ಜನರ ಮೇಲೆ ಏಪ್ರಿಲ್ 1ರಿಂದ ಕಸದ ಸೆಸ್ (Garbage Cess) ಹೇರುತ್ತಿದೆ ದರಬೀಜಾಸುರ ಸರಕಾರ!! ಕಸ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ ಗುರಿ ಹಾಕಿಕೊಂಡಿದೆ ಎಂದಿರುವ ಸಚಿವರು; ಸರಕಾರವನ್ನು ದರ ಬೀಜಾಸುರ ಸರಕಾರ ಎಂದು ಕರೆದಿದ್ದಾರೆ ಹಾಗೂ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಗೆ ಹೋಲಿಸಿ ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್, ಕಾಂಗ್ರೆಸ್ ಕಂಪನಿ ಸರಕಾರ ಎಂದು ಮೂಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post