ಕಲ್ಪ ಮೀಡಿಯಾ ಹೌಸ್ | ನವದೆಹಲಿ/ಬೆಂಗಳೂರು |
ರಾಜ್ಯ ವಿಧಾನಸಭೆಗೆ ಮೇ 10ರಂದು ಮತದಾನ ನಡೆಯಲಿದ್ದು, ಈ ವೇಳೆ ನಡೆಯಬಹುದಾದ ಅಕ್ರಮಗಳನ್ನು ತಡೆಗಟ್ಟಲು ಕೇಂದ್ರ ಚುನಾವಣಾ ಆಯೋಗ Central Election Commission ಕಟ್ಟುನಿಟ್ಟಿನ ಹಲವು ಕ್ರಮಗಳನ್ನು ಕೈಗೊಂಡಿದೆ.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣೆ ವೇಳೆ ನಡೆಯಬಹುದಾದ ಅಕ್ರಮಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, 19 ಜಿಲ್ಲಾ ಗಡಿಗಳಲ್ಲಿ 171 ಅಂತಾರಾಜ್ಯ ಚೆಕ್ ಪೋಸ್ಟ್ ತೆರೆಯಲಾಗಿದೆ.
ಅಬಕಾರಿ, ಪೊಲೀಸ್ ಹಾಗೂ ಅರಣ್ಯ ಚೆಕ್ ಪೋಸ್ಟ್’ಗಳನ್ನು ತೆರಯಲಾಗಿದ್ದು, ಹೆದ್ದಾರಿ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತದೆ. ಪ್ರಮುಖವಾಗಿ ಗೌಡೋನ್/ವೇರ್ ಹೌಸ್’ಗಳಲ್ಲಿ ನಿಯಮಿತವಾಗಿ ತಪಾಸಣೆ ನಡೆಸಲು ಸೂಚಿಸಲಾಗಿದೆ ಎಂದರು.
ಇನ್ನು, ಆಪ್ ಸಹಾಯದಿಂದ ಚುನಾವಣಾ ಅಕ್ರಮಗಳನ್ನು ಜನರು ದೂರು ನೀಡಬಹುದು. ಈ ಹಿಂದೆ ನಡೆದ ಐದು ರಾಜ್ಯಗಳ ಚುನಾವಣೆಯಲ್ಲಿ 1028 ಕೋಟಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಕರ್ನಾಟಕದಲ್ಲಿ ಅಕ್ರಮ ತಡೆಯಲು 2400 ತಂಡಗಳನ್ನು ರಚಿಸಿದೆ. ವಿಮಾನ ನಿಲ್ದಾಣಗಳಲ್ಲಿ ಪರಿಶೀಲನೆಗಳನ್ನು ನಡೆಸಲಾಗುತ್ತದೆ ಎಂದರು.
ಪ್ರಮುಖ ಸ್ಥಳಗಳಲ್ಲಿ ಎಲ್ಲ ವಾಹನಗಳನ್ನು ತಪಾಸಣೆಗೆ ಒಳಪಡಿಸಲಿದ್ದು, ಅಕ್ರಮಗಳ ತಡೆಗೆ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳಲಾಗುವುದು. ಡ್ರಗ್ಸ್, ಹಣ, ಆಮಿಷವೊಡ್ಡುವ ವಸ್ತುಗಳ ಬಗ್ಗೆ ಹೆಚ್ಚಿನ ಗಮನ ಹರಿಸಲಾಗುತ್ತಿದ್ದು, ಅಕ್ರಮಗಳ ತಡೆಗೆ 2400 ತಂಡಗಳ ರಚನೆ ಮಾಡಲಾಗಿದೆ. ಬ್ಯಾಂಕ್’ಗಳು ಚುನಾವಣೆ ಮುಕ್ತಾಯವಾಗುವವರೆಗೂ ರಾತ್ರಿ ವೇಳೆ ಎಟಿಎಂಗೆ ಹಣ ತುಂಬಿಸುವಂತಿಲ್ಲ ಎಂದು ಸೂಚಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post