ಕಲ್ಪ ಮೀಡಿಯಾ ಹೌಸ್
ನವದೆಹಲಿ/ಬೆಂಗಳೂರು: ನೂತನ ಪ್ಲವನಾಮ ಸಂವತ್ಸರದ ಆರಂಭದೊಂದಿಗೆ ಜನತೆ ಯುಗಾದಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಸೇರಿದಂತೆ ಅನೇಕ ಗಣ್ಯರು ಶುಭ ಹಾರೈಸಿದ್ದಾರೆ.
ಕನ್ನಡದಲ್ಲೇ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗೂ ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ ಎಂದಿದ್ದಾರೆ.
ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗು ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ.
— Narendra Modi (@narendramodi) April 13, 2021
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಹ ಕನ್ನಡದಲ್ಲಿ ಟ್ವೀಟ್ ಮಾಡಿ ಜನತೆಗೆ ಶುಭ ಹಾರೈಸಿದ್ದು, ಯುಗಾದಿ ಹಬ್ಬದ ಈ ಸಮಯದಲ್ಲಿ ಕರ್ನಾಟಕದ ನಮ್ಮ ಸಹೋದರ, ಸಹೋದರಿಯರಿಗೆ ಹಾಗೂ ವಿಶ್ವದೆಲ್ಲೆಡೆ ಇರುವ ಕನ್ನಡಿಗರಿಗೆ ಶುಭಾಶಯಗಳು ಮತ್ತು ಶುಭಹಾರೈಕೆಗಳು. ಈ ಶುಭ ಸಂದರ್ಭವು ಎಲ್ಲರಿಗೂ ಒಳ್ಳೆಯ ಆರೋಗ್ಯ, ನೆಮ್ಮದಿ ಹಾಗು ಸಮೃದ್ಧತೆ ತರಲಿ ಎಂದು ಹಾರೈಸಿದ್ದಾರೆ.
ಯುಗಾದಿ ಹಬ್ಬದ ಈ ಸಮಯದಲ್ಲಿ ಕರ್ನಾಟಕದ ನಮ್ಮ ಸಹೋದರ, ಸಹೋದರಿಯರಿಗೆ ಹಾಗೂ ವಿಶ್ವದೆಲ್ಲೆಡೆ ಇರುವ ಕನ್ನಡಿಗರಿಗೆ ಶುಭಾಶಯಗಳು ಮತ್ತು ಶುಭಹಾರೈಕೆಗಳು. ಈ ಶುಭ ಸಂದರ್ಭವು ಎಲ್ಲರಿಗೂ ಒಳ್ಳೆಯ ಆರೋಗ್ಯ, ನೆಮ್ಮದಿ ಹಾಗು ಸಮೃದ್ಧತೆ ತರಲಿ
— President of India (@rashtrapatibhvn) April 13, 2021
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿ, ನಾಡಿನ ಸಮಸ್ತ ಜನತೆಗೆ ಯುಗಾದಿಯ ಹಾರ್ದಿಕ ಶುಭಾಶಯಗಳು. ನೂತನ ಪ್ಲವ ಸಂವತ್ಸರವು ಎಲ್ಲರ ಬಾಳಿನಲ್ಲಿ ಆರೋಗ್ಯ, ಸುಖ, ಸಮೃದ್ಧಿ, ಯಶಸ್ಸನ್ನು ಹೊತ್ತು ತರಲಿ, ಸಾಂಕ್ರಾಮಿಕ ರೋಗದ ಪಿಡುಗು ನಾಡಿನಿಂದ ತೊಲಗಲಿ. ನಾವೂ ಸುರಕ್ಷಿತರಾಗಿದ್ದು, ಇತರರೂ ಸುರಕ್ಷಿತರಾಗಿರುವಂತೆ, ಎಲ್ಲ ಮುನ್ನೆಚ್ಚರಿಕೆ ವಹಿಸಿ ಹಬ್ಬ ಆಚರಿಸೋಣ ಎಂದು ಆಶಿಸಿದ್ದಾರೆ.
‘ನಾಡಿನ ಸಮಸ್ತ ಜನತೆಗೆ ಯುಗಾದಿಯ ಹಾರ್ದಿಕ ಶುಭಾಶಯಗಳು. ನೂತನ ಪ್ಲವ ಸಂವತ್ಸರವು ಎಲ್ಲರ ಬಾಳಿನಲ್ಲಿ ಆರೋಗ್ಯ, ಸುಖ, ಸಮೃದ್ಧಿ, ಯಶಸ್ಸನ್ನು ಹೊತ್ತು ತರಲಿ, ಸಾಂಕ್ರಾಮಿಕ ರೋಗದ ಪಿಡುಗು ನಾಡಿನಿಂದ ತೊಲಗಲಿ. ನಾವೂ ಸುರಕ್ಷಿತರಾಗಿದ್ದು, ಇತರರೂ ಸುರಕ್ಷಿತರಾಗಿರುವಂತೆ, ಎಲ್ಲ ಮುನ್ನೆಚ್ಚರಿಕೆ ವಹಿಸಿ ಹಬ್ಬ ಆಚರಿಸೋಣ’ : ಮುಖ್ಯಮಂತ್ರಿ @BSYBJP. pic.twitter.com/amsYdMPRmF
— CM of Karnataka (@CMofKarnataka) April 13, 2021
ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಟ್ವೀಟ್ ಮಾಡಿ, ಓ ಯುಗಾದಿಯೇ, ಹೊಸ ಕಾಲದ ಆದಿಯೇ, ಲೋಕದ ಜನರ ಕಷ್ಟಗಳ ನೀಗುತ್ತಾ ಬಾ…ಆರೋಗ್ಯದ ಭಾಗ್ಯವನ್ನು ಕರುಣಿಸು ಬಾ… ಎಲ್ಲರ ಬಾಳಲ್ಲಿ ಹೊಸ ವರ್ಷದ ಉತ್ಸಾಹ ತುಂಬುತ್ತಾ ಬಾ. ಎಂಬ ಕವನದ ಸಾಲುಗಳೊಂದಿಗೆ ನಾಡಿನ ಎಲ್ಲ ನನ್ನ ಪ್ರೀತಿಯ ಬಂಧುಗಳಿಗೆ ಯುಗಾದಿಯ ಹಾರ್ದಿಕ ಶುಭಾಶಯಗಳು ಎಂದು ನಾಡಿನ ಜನತೆಗೆ ಶುಭ ಕೋರಿದ್ದಾರೆ.
ಓ ಯುಗಾದಿಯೇ,
ಹೊಸ ಕಾಲದ ಆದಿಯೇ,
ಲೋಕದ ಜನರ ಕಷ್ಟಗಳ ನೀಗುತ್ತಾ ಬಾ…
ಆರೋಗ್ಯದ ಭಾಗ್ಯವನ್ನು ಕರುಣಿಸು ಬಾ…
ಎಲ್ಲರ ಬಾಳಲ್ಲಿ ಹೊಸ ವರ್ಷದ ಉತ್ಸಾಹ ತುಂಬುತ್ತಾ ಬಾ.ನಾಡಿನ ಎಲ್ಲ ನನ್ನ ಪ್ರೀತಿಯ ಬಂಧುಗಳಿಗೆ ಯುಗಾದಿಯ ಹಾರ್ದಿಕ ಶುಭಾಶಯಗಳು. pic.twitter.com/pZs81BQ2ld
— Siddaramaiah (@siddaramaiah) April 13, 2021
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post