ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಬಿಸಿಸಿಐ BCCI 36ನೆಯ ಅಧ್ಯಕ್ಷರಾಗಿ ಬೆಂಗಳೂರಿನ ರೋಜರ್ ಬಿನ್ನಿ Roger Binni ಅವರನ್ನು ಆಯ್ಕೆ ಮಾಡಲಾಗಿದೆ.
ಹಾಲಿ ಅಧ್ಯಕ್ಷ ಸೌರವ್ ಗಂಗೂಲಿ ಅವರ ಅಧಿಕಾರವಧಿ ಅ.18 ರಂದು ಅಂತ್ಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಹಲವು ಸುತ್ತಿನ ಚರ್ಚೆ ನಡೆಸಿ, ಅಂತಿಮವಾಗಿ 67 ವರ್ಷದ ಬಿನ್ನಿ ಅವರನ್ನು ಆಯ್ಕೆ ಮಾಡಲಾಗಿದೆ.
1983ರ ವಿಶ್ವ ಕಪ್ ವಿಜೇತ ಟೀಂ ಇಂಡಿಯಾ ಹೀರೋ, ಬೆಂಗಳೂರಿನ ರೋಜರ್ ಬಿನ್ನಿ ಬಿಸಿಸಿಐನ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ಇನ್ನು ಇದೇ ವೇಳೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಬಿಸಿಸಿಐ ಕಾರ್ಯದರ್ಶಿಯಾಗಿ ಎರಡನೆಯ ಅವಧಿಗೆ ಮುಂದುವರೆಯಲಿದ್ದಾರೆ. ಐಸಿಸಿ ಮಂಡಳಿಯಲ್ಲಿ ಗಂಗೂಲಿ ಬದಲಿಗೆ ಜಯ್ ಶಾ ಭಾರತವನ್ನು ಪ್ರತಿನಿಧಿಸಲಿದ್ದು, ರಾಜೀವ್ ಶುಕ್ಲಾ ಉಪಾಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.
Also read: ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ವರಾಳೆ ನೇಮಕ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















