ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ DKShivakumar ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೈಕೋರ್ಟ್ ನೀಡಿರುವ ಮಧ್ಯಂತರ ತಡೆಯನ್ನು ರದ್ದು ಮಾಡಲು ಸುಪ್ರೀಂ ಕೋರ್ಟ್ Supreme Court ನಿರಾಕರಣೆ ಮಾಡಿದೆ.
2020ರ ಅಕ್ಟೋಬರ್ 3 ರಂದು ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸಿಬಿಐ ಪ್ರಕರಣ ದಾಖಲಿಸಿತ್ತು. ಈ ಪ್ರಕರಣ ತನಿಖೆ ಕುರಿತಂತೆ ಇತ್ತೀಚೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಲಾಗಿತ್ತು.
ಆದಾಯ ತೆರಿಗೆ ಇಲಾಖೆ 2017ರಲ್ಲಿ ದಾಳಿ ನಡೆಸಿದ್ದು, ಅದರ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಅವರ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯ ನಂತರ, ಸಿಬಿಐ ನಂತರ ಅವರ ವಿರುದ್ಧ ಎಫ್‌ಐಆð ದಾಖಲಿಸಲು ರಾಜ್ಯ ಸರ್ಕಾರದಿಂದ ಅನುಮತಿ ಕೋರಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post