ಕಲ್ಪ ಮೀಡಿಯಾ ಹೌಸ್ | ನವದೆಹಲಿ |
2006-07ರ ಐಟಿ ಕಾರಿಡಾರ್ ಡಿನೋಟಿಫಿಕೇಷನ್ DE notification ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ Former CM B S Yadiyurappa ಅವರಿಗೆ ಸುಪ್ರೀಂ ಕೋರ್ಟ್ ಬಿಗ್‌ರಿಲೀಫ್ ನೀಡಿದ್ದು, ತನಿಖೆ ನಡೆಸದಂತೆ ಸೂಚಿಸಿದೆ.
ಪ್ರಕಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಸೂಚಿಸಿದ್ದ ಹಿನ್ನೆಲೆಯಲ್ಲಿ ಈ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಈ ಪ್ರಕರಣದ ತನಿಖೆಯನ್ನು ನಡೆಸದಂತೆ ಸುಪ್ರೀಂ ಕೋರ್ಟ್ Supreme court ಇಂದು ಸೂಚನೆ ನೀಡಿದೆ. ಹಲವು ಎಕರೆ ಭೂಮಿಯನ್ನು ಡಿನೋಟಿಫಿಫೈ ಮಾಡಿದ ಆರೋಪದ ಮೇಲೆ ಬಿಎಸ್‌ವೈ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಹಿರಿಯ ವಕೀಲ ಕೆ.ಬಿ. ವಿಶ್ವನಾಥನ್ ಅವರು ಯಡಿಯೂರಪ್ಪ ಪರ ವಾದಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಹಾಗೂ ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಹಾಗೂ ಹಿಮಾ ಕೊಯ್ಲಿ ಅವರಿದ್ದ ಪೀಠವು ಈ ಆದೇಶ ನೀಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post