ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಆಂದ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಸಂಬಂಧಪಟ್ಟಂತೆ ಬಿಜೆಪಿ ಸಾಂಸ್ಥಿಕ ಪುನರ್ ರಚನೆ ಕೈಗೊಂಡಿದ್ದು, ಎರಡು ರಾಜ್ಯಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಿದೆ.
ಆಂಧ್ರಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಕೇಂದ್ರ ಸಚಿವರಾದ ಡಿ. ಪುರಂಡೇಶ್ವರಿ, ತೆಲಂಗಾಣ ಬಿಜೆಪಿ ಅಧ್ಯಕ್ಷರಾಗಿ ಕೇಂದ್ರ ಸಚಿವ ಜಿ. ಕಿಶನ್ ಅವರನ್ನು ಆಯ್ಕೆ ಮಾಡಲಾಗಿದೆ.
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಹಾಗೂ ತೆಲಂಗಾಣ ಮಾಜಿ ಸಚಿವ ಇಟೇಲ ರಾಜೇಂದ್ರ ಅವರನ್ನು ತೆಲಂಗಣ ಚುನಾವಣಾ ನಿರ್ವಹಣಾ ಸಮಿತಿ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಿಪಿ ನಡ್ಡಾ ತಿಳಿಸಿದ್ದಾರೆ.
Also read: ಭದ್ರಾವತಿ ನಗರಸಭೆ ಅಧ್ಯಕ್ಷೆಯಾಗಿ ಶೃತಿ ವಸಂತಕುಮಾರ್ ಅವಿರೋಧ ಆಯ್ಕೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post