ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ರಾಷ್ಟ್ರದ ಹಲವು ರಾಜ್ಯಗಳಲ್ಲಿ ದೊಂಬಿ ಹಾಗೂ ಗಲಭೆ ನಡೆಸಿರುವ ಆರೋಪ ಹಾಗೂ ಅಪರಾಧ ಹೊತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್’ಐ)ವನ್ನು PFI ನಿಷೇಧ ಮಾಡಲು ಕೇಂದ್ರ ಸರ್ಕಾರ Central government ನಿರ್ಧರಿಸಿದೆ ಎಂದು ಹೇಳಲಾಗಿದೆ.
ಈ ಕುರಿತಂತೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಸಂಭವಿಸಿರುವ ಗಲಭೆಯ ಹಿಂದೆ ಪಿಎಫ್’ಐ ಕೈವಾಡವಿದೆ. ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುತ್ತಿದ್ದು, ಗಲಭೆಯಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಂಚು ರೂಪಿಸಿದೆ ಎಂದು ಆರೋಪಿಸಲಾಗಿದೆ.
ಅಲ್ಲದೇ, ರಾಮನವಮಿ ನಂತರ ಉತ್ತರ ಭಾರತದಲ್ಲಿ ಸಂಭವಿಸಿದ ಹಿಂಸಾಚಾರದ ನಂತರ ಪಿಎಫ್’ಐ ನಿಷೇಧದ ಕುರಿತಾಗಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಈ ಬಗ್ಗೆ ಸೂಕ್ಷ್ಮವಾಗಿ ಮಾಹಿತಿ ಕಲೆ ಹಾಕಿ ಅವಲೋಕಿಸುತ್ತಿದೆ. ಬಹುತೇಕ ಮುಂದಿನ ವಾರದಲ್ಲಿ ಪಿಎಫ್’ಐ ನಿಷೇಧದ ಕುರಿತಾಗಿ ಘೋಷಣೆ ಮಾಡಲಿದೆ ಎಂದು ಹೇಳಲಾಗಿದೆ.
Also read: ಈಶ್ವರಪ್ಪ ರಾಜೀನಾಮೆ ಕುರಿತು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದೇನು?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post