ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಇಸ್ರೇಲ್ ಮತ್ತು ಪ್ಯಾಲೆಸ್ತೀನ್ Israel-Palestine ನಡುವೆ ನಡೆಯುತ್ತಿರುವ ಯುದ್ಧದಲ್ಲಿ ಅಪಾರ ಸಾವು ನೋವು ಸಂಭವಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿ PM Narendra Modi ಉಗ್ರವಾಗಿ ಖಂಡಿಸಿದ್ದಾರೆ.
ವಾಯ್ಸ್ ಆಫ್ ದಿ ಗ್ಲೋಬಲ್ ಸೌತ್ ಶೃಂಗಸಭೆಯಲ್ಲಿ ಮಾತನಾಡಿದ ಪ್ರಧಾನಿಯವರು, ಪೂರ್ವ ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನ್ ಪ್ರಾಂತ್ಯದಲ್ಲಿ ವಸಾಹತು ಚಟುವಟಿಕೆಗಳನ್ನು ಖಂಡಿಸುವ ವಿಶ್ವಸಂಸ್ಥೆಯ ನಿರ್ಣಯದ ಪರವಾಗಿ ಭಾರತ ಮತ ಚಲಾಯಿಸಿದ ಬೆನ್ನಲ್ಲೇ ಅವರು ಹೇಳಿಕೆಗಳನ್ನು ನೀಡಿದ್ದಾರೆ.
ಯುದ್ಧದಲ್ಲಿ ಅಪಾರ ಪ್ರಮಾಣದ ಸಾವು-ನೋವುಗಳು ಸಂಭವಿಸಿರುವುದನ್ನು ಭಾರತ ಬಲವಾಗಿ ಖಂಡಿಸುತ್ತದೆ. ಭಾರತವು ಸಂಘರ್ಷದಲ್ಲಿ ಸಂಯಮವನ್ನು ಅನುಸರಿಸಿದೆ ಎಂದರು.
Also read: ವಿದ್ಯುತ್ ಕಳ್ಳತನದ ಬಗ್ಗೆ ಮುಚ್ಚಿಹಾಕಲು ಯತೀಂದ್ರ ವಿರುದ್ಧ ಆರೋಪ: ಮುಖ್ಯಮಂತ್ರಿ ಸಿದ್ದರಾಮಯ್ಯ
ನಾವು ಸಂವಾದ ಮತ್ತು ರಾಜತಾಂತ್ರಿಕತೆಗೆ ಒತ್ತು ನೀಡಿದ್ದೇವೆ. ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಲ್ಲಿ ನಾಗರಿಕರ ಸಾವನ್ನು ನಾವು ಬಲವಾಗಿ ಖಂಡಿಸುತ್ತೇವೆ. ಪ್ಯಾಲೆಸ್ತೀನ್ ಅಧ್ಯಕ್ಷ ಮಹಮದ್ ಅಬ್ಬಾಸ್ ಅವರೊಂದಿಗಿನ ಮಾತುಕತೆಯ ನಂತರ ಭಾರತವು ಪ್ಯಾಲೆಸ್ತೀನಿಯರಿಗೆ ಮಾನವೀಯ ನೆರವು ಕಳುಹಿಸಿದೆ. ಇದು ಜಾಗತಿಕ ಒಳಿತಿಗಾಗಿ ಜಾಗತಿಕ ದಕ್ಷಿಣದ ದೇಶಗಳು ಒಂದಾಗಬೇಕಾದ ಸಮಯ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post