ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಚೀನಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತದ ಜನನಿಬಿಡ ಪ್ರದೇಶಗಳಲ್ಲಿ ಸಾರ್ವಜನಿಕರು ಹೆಚ್ಚಿನ ಜಾಗ್ರತೆ ವಹಿಸಿ, ಮಾಸ್ಕ್ Mask ಧರಿಸಬೇಕು ಎಂದು ಕೇಂದ್ರ ಸರ್ಕಾರ ಸಲಹೆ ನೀಡಿದೆ.
ಈ ಕುರಿತಂತೆ ಮಾತನಾಡಿರುವ ನೀತಿ ಆಯೋಗದ ಸದಸ್ಯ(ಆರೋಗ್ಯ) ಡಾ.ವಿ.ಕೆ. ಪೌಲ್, ಚೀನಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿವೆ. ಹೀಗಾಗಿ, ದೇಶದಲ್ಲಿ ಮುಂಜಾಗ್ರತಾ ಕ್ರಮಗಳನ್ನು ವಹಿಸಲು ಚರ್ಚಿಸಲಾಗುತ್ತಿದೆ ಎಂದರು.
ಜನರು ಭಯಭೀತರಾಗುವ ಅಗತ್ಯವಿಲ್ಲ. ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ. ದೇಶದ ಅರ್ಹ ಜನಸಂಖ್ಯೆಯ ಶೇ 27 ರಿಂದ 28ರಷ್ಟು ಜನರು ಮಾತ್ರ ಕೋವಿಡ್ 19ರ Covid-19 ಬೂಸ್ಟರ್ ಡೋಸ್ Booster Dose ಅನ್ನು ತೆಗೆದುಕೊಂಡಿದ್ದಾರೆ ಎಂದರು.
Also read: ಮುಂಬರುವ ಚುನಾವಣೆಯಲ್ಲಿ ನನ್ನ ಸ್ಪರ್ಧೆ ನಿಶ್ಚಿತ: ಪ್ರಮೋದ್ ಮುತಾಲಿಕ್ ಸ್ಪಷ್ಟನೆ
ಸಾರ್ವಜನಿಕರು ಜನನಿಬಿಡ ಸ್ಥಳಗಳಲ್ಲಿ ಜಾಗ್ರತೆ ವಹಿಸಬೇಕು. ಅಲ್ಲದೇ, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಹೃದಯ ರೋಗ, ಬಿಪಿ, ಉಸಿರಾಟದ ತೊಂದರೆ ಇರುವವರು ಅಥವಾ ವಯಸ್ಸಾದವರು ವಿಶೇಷವಾಗಿ ಇದನ್ನು ಅನುಸರಿಸಬೇಕು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post