ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೇಶದ ಶ್ರೀಮಂತ ಟಾಪ್ 10 ಶಾಸಕರ ಪೈಕಿ ಬಿಜೆಪಿಯ ಪರಾಗ್ ಶಾ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ #D K Shivakumar ಎರಡನೇ ಸ್ಥಾನದಲ್ಲಿದ್ದಾರೆ.
ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮಸ್ 28 ರಾಜ್ಯ, 3 ಕೇಂದ್ರಾಡಳಿತ ಪ್ರದೇಶದಲ್ಲಿನ ಒಟ್ಟು 4,092 ಶಾಸಕರ ಆಸ್ತಿ ಅಧ್ಯಯನದ ಮಾಡಿ ಈ ವರದಿ ಬಿಡುಗಡೆ ಮಾಡಿದ್ದು, ಮುಂಬೈನ ಘಾಸ್ಕೋಪರ್ ಕ್ಷೇತ್ರ ಪ್ರತಿನಿಧಿಸುವ ಬಿಜೆಪಿಯ ಪರಾಗ್ ಶಾ 3,383 ಕೋಟಿ ರೂ. ಆಸ್ತಿಯೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಕೆಪಿಸಿಸಿ ಅಧ್ಯಕ್ಷ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 1,413 ಕೋಟಿ ರೂ. ಆಸ್ತಿಯೊಂದಿಗೆ 2ನೇ ಸ್ಥಾನ ಪಡೆದಿದ್ದಾರೆ.
Also read: ಪಿಯುಸಿ ನಂತರ ಯಾವ ಕೋರ್ಸ್ ಉತ್ತಮ? ಗೊಂದಲವಿದೆಯೇ? ಮಾರ್ಚ್ 23ರಂದು ಸಿಗಲಿದೆ ಪರಿಹಾರ
ಕರ್ನಾಟಕ ರಾಜ್ಯ ಮೊದಲ ಸ್ಥಾನದಲ್ಲಿದ್ದು, 223 ಶಾಸಕರ ಒಟ್ಟು ಆಸ್ತಿ 14,179 ಕೋಟಿ ರೂ.ನಷ್ಟಿದೆ. ಗೌರಿಬಿದನೂರಿನ ಪಕ್ಷೇತರ ಶಾಸಕ ಕೆ.ಹೆಚ್.ಪುಟ್ಟಸ್ವಾಮಿ ಗೌಡ 1,267 ಕೋಟಿ ಆಸ್ತಿಯೊಂದಿಗೆ 3ನೇ ಸ್ಥಾನದಲ್ಲಿದ್ದಾರೆ.
ಇನ್ನುಳಿದಂತೆ 4ನೇ ಸ್ಥಾನದಲ್ಲಿ ಗೋವಿಂದರಾಜನಗರ ಕ್ಷೇತ್ರದ ಶಾಸಕ ಪ್ರಿಯಾ ಕೃಷ್ಣ ಹಾಗೂ 1ಂನೇ ಸ್ಥಾನದಲ್ಲಿ ಹೆಬ್ಬಾಳ ಕ್ಷೇತ್ರದ ಬೈರತಿ ಸುರೇಶ್ ಕ್ರಮವಾಗಿ 1,156 ಕೋಟಿ ರೂ. ಆಸ್ತಿ ಹಾಗೂ 648 ಕೋಟಿ ರೂ. ಆಸ್ತಿಯನ್ನು ಹೊಂದಿದ್ದಾರೆ. ಕರ್ನಾಟಕದ ಎಲ್ಲಾ ಶಾಸಕರ ಆಸ್ತಿ ಒಟ್ಟು 14,179 ಕೋಟಿ ರೂ. ಎಂದು ವರದಿ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post