ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೆಯ ಜನ್ಮದಿನಾಚರಣೆಯನ್ನು ಇಂದು ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಇಂದಿನ ದಿನವನ್ನು ಪ್ರತಿವರ್ಷ ರಾಷ್ಟ್ರೀಯ ರಜಾದಿನವನ್ನಾಗಿ ಘೋಷಿಸಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ನೇತಾಜಿ ಅವರ ಜನ್ಮದಿನವನ್ನು ರಾಷ್ಟ್ರೀಯ ರಜಾದಿನವೆಂದು ಘೋಷಿಸಲು ನಾವು ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ಇಡೀ ರಾಷ್ಟ್ರವು ರಾಷ್ಟ್ರೀಯ ನಾಯಕನಿಗೆ ಗೌರವ ಸಲ್ಲಿಸಲು ಮತ್ತು #DeshNayakDibas ಅನ್ನು ಅತ್ಯಂತ ಸೂಕ್ತವಾದ ರೀತಿಯಲ್ಲಿ ಆಚರಿಸಲು ಅನುವು ಮಾಡಿಕೊಡುತ್ತದೆ ಎಂದಿದ್ದಾರೆ.
We again appeal to the Central Government that Netaji’s birthday be declared a National Holiday to allow the entire Nation to pay homage to the National Leader and celebrate #DeshNayakDibas in most befitting manner.(7/7)
— Mamata Banerjee (@MamataOfficial) January 23, 2022
ಬೋಸ್ ಅವರು ದೇಶಭಕ್ತಿ, ಧೈರ್ಯ, ನಾಯಕತ್ವ, ಏಕತೆ ಮತ್ತು ಸಹೋದರತ್ವದ ಪ್ರತಿರೂಪವಾಗಿದ್ದಾರೆ. ನೇತಾಜಿ ಅವರು ಇಂದಿನ ಪೀಳಿಗೆಗೆ ಸ್ಫೂರ್ತಿಯಾಗಿದ್ದು, ಭವಿಷ್ಯದಲ್ಲೂ ಅವರ ವ್ಯಕ್ತಿತ್ವ ಮಾದರಿಯಾಗಿರುತ್ತದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post