ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಡಿಜಿಟಲ್ ರೂಪಾಯಿ, ಭೌತಿಕ ರೂಪಾಯಿಯ ಡಿಜಿಟಲ್ ರೂಪವಾಗಿರುತ್ತದೆ ಮತ್ತು ಅದನ್ನು ಆರ್‌ಬಿಐ ನಿಯಂತ್ರಿಸಲಿದ್ದು, ಮುಂಬರುವ ವರ್ಷಗಳಲ್ಲಿ ಡಿಜಿಟಲ್ ಆರ್ಥಿಕತೆ ಉತ್ತೇಜಿಸಲು ಇನ್ನಷ್ಟು ಸಹಕಾರಿಯಾಗಲಿದೆ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಬಿಜೆಪಿ ಆಯೋಜಿಸಿದ್ದ ಆತ್ಮನಿರ್ಭ ಅರ್ಥವ್ಯವಸ್ಥೆ ವಿಚಾರ ಸಂಕಿರಣ ಉದ್ದೇಶಿಸಿ ಮಾತನಾಡಿದ ಅವರು, ಭಾರತೀಯ ರಿಸರ್ವ್ ಬ್ಯಾಂಕ್ – ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ ಅಥವಾ . ಯಾರಾದರೂ ಡಿಜಿಟಲ್ ಕರೆನ್ಸಿಯಲ್ಲಿ ಪಾವತಿ ಮಾಡಿದರೆ, ಅದನ್ನು ನಗದು ರೂಪದಲ್ಲಿ ಬದಲಾಯಿಸಲು ಸಾಧ್ಯವಾಗುತ್ತದೆ” ಎಂದು ತಿಳಿಸಿದ್ದಾರೆ.

ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ (ಸಿಬಿಡಿಸಿ) ಡಿಜಿಟಲ್ ಆರ್ಥಿಕತೆಯನ್ನು ಬಲಪಡಿಸುತ್ತದೆ. ಹಾಗೂ ಡಿಜಿಟಲ್ ಪಾವತಿ, ಆನ್‌ಲೈನ್ ಹಣ ವರ್ಗಾವಣೆಯನ್ನು ಹೆಚ್ಚು ಸುರಕ್ಷಿತ ಮತ್ತು ಅಪಾಯ-ಮುಕ್ತಗೊಳಿಸುತ್ತದೆ. “ಇದು ಜಾಗತಿಕ ಡಿಜಿಟಲ್ ಪಾವತಿ ವ್ಯವಸ್ಥೆಗಳ ಅಭಿವೃದ್ಧಿಯಲ್ಲಿಯೂ ಸುಲಭವಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಡಿಜಿಟಲ್ ರೂಪಾಯಿಯನ್ನು ನಗದು ರೂಪದಲ್ಲಿ ವಿನಿಮಯ ಮಾಡಿಕೊಳ್ಳಬಹುದು ಇದರಿಂದ ಫಿನ್‌ಟೆಕ್ ವಲಯದಲ್ಲಿ ಕ್ರಾಂತಿಯನ್ನುಂಟು ಮಾಡುತ್ತದೆ ಮತ್ತು ನಗದು ನಿರ್ವಹಣೆ, ಮುದ್ರಣ, ಲಾಜಿಸ್ಟಿಕ್ಸ್ ನಿರ್ವಹಣೆಯಲ್ಲಿನ ಹೊರೆಯನ್ನು ಕಡಿಮೆ ಮಾಡುವುದರ ಜೊತೆಗೆ ಹೊಸ ಅವಕಾಶಗಳ ಬಾಗಿಲು ತೆರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬ್ಲಾಕ್‌ಚೈನ್ ಮತ್ತು ಇತರ ತಂತ್ರಜ್ಞಾನಗಳನ್ನು ಬಳಸಿಕೊಂಡು 2022-23ರಲ್ಲಿ ಭಾರತವು ‘ಡಿಜಿಟಲ್ ರೂಪಾಯಿ’ ಪ್ರಾರಂಭಿಸಲಿದೆ ಎಂದು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















