ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪ್ರತ್ಯೇಕ ರಾಷ್ಟ್ರ ಹೇಳಿಕೆ ಸಂಸತ್ತಿನಲ್ಲಿ ಭಾರೀ ಗದ್ದಲ, ಕೋಲಾಹಲಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಸಂಸದ ಸುರೇಶ್ DK Suresh ಅವರು ಸದನದಲ್ಲಿ ಬೇಷರತ್ ಕ್ಷಮೆಯಾಚಿಸಬೇಕೆಂದು ಆಡಳಿತ ಪಕ್ಷದ ಸದಸ್ಯರು ಆಗ್ರಹಿಸುತ್ತಿದ್ದಾರೆ.
ಡಿಕೆ ಸುರೇಶ್ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಪಿಯೂಶ್ ಗೋಯಲ್ Piyush Goyal ಇಂದು ರಾಜ್ಯಸಭೆಯಲ್ಲಿ ಪ್ರಸ್ತಾಪ ಮಾಡಿದರು. ಜೊತೆಗೆ ಕಾಂಗ್ರೆಸ್ ಪಕ್ಷ ಈ ಬಗ್ಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

Also read: ರೈಲಿನಲ್ಲಿ ಮಹಿಳೆ ಹತ್ಯೆ: ಉನ್ನತ ಮಟ್ಟದ ತನಿಖೆಗೆ ರಮೇಶ್ ಶೆಟ್ಟಿ ಶಂಕರಘಟ್ಟ ಆಗ್ರಹ
ಇಂದು ರಾಜ್ಯಸಭೆ ಕಲಾಪದ ವೇಳೆ ಈ ವಿಚಾರವಾಗಿ ಪ್ರಸ್ತಾಪಿಸಿದ ಅವರು, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಾವು ಒಗ್ಗಟ್ಟಾಗಿದ್ದೇವೆ. ಭಾರತಕ್ಕಾಗಿ ಕಾಂಗ್ರೆಸ್ ನಾಯಕಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ತ್ಯಾಗ ಬಲಿದಾನ ಮಾಡಿದ್ದಾರೆ. ದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರೂ ಸಹಿಸಲ್ಲ. ಯಾವುದೇ ಪಕ್ಷದವರಾಗಿರಲಿ ನಾವು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಖರ್ಗೆ ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post