ಕಲ್ಪ ಮೀಡಿಯಾ ಹೌಸ್
ನವದೆಹಲಿ: ದೇಶದಲ್ಲಿ ಕೊರೋನಾ 2ನೇ ಅಲೆ ತೀವ್ರ ಸ್ವರೂಪ ಪಡೆದಿದ್ದು, ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ ಭಾರತದಲ್ಲಿ 2,67,334 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 4529 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,54,96,330ಕ್ಕೆ ಏರಿಕೆಯಾಗಿದ್ದು, ಸಾವಿಗೀಡಾದವರ ಸಂಖ್ಯೆ 2,83,248ಕ್ಕೆ ತಲುಪಿದೆ.
ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 32,26,719ಕ್ಕೆ ಏರಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 3,89,851 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,19,86,363ಕ್ಕೆ ತಲುಪಿದೆ.
ಇನ್ನು ಒಂದೇ ದಿನ 20,08,296 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಒಟ್ಟು ಇಲ್ಲಿಯವರೆಗೆ 32,03,01,177 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post