ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೇಶದಾದ್ಯಂತ ಲೋಕಸಭೆಗೆ ಈಗ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್’ಡಿಎ ಭರ್ಜರಿ ಗೆಲುವು ದಾಖಲಿಸಲಿದೆ ಎಂದು ಸಮೀಕ್ಷಾ ವರದಿಯೊಂದು ಹೇಳಿದೆ.
ಈ ಕುರಿತಂತೆ ಖಾಸಗಿ ಟಿವಿ ಚಾನಲ್’ವೊಂದು ಸಮೀಕ್ಷೆ ನಡೆಸಿದ್ದು, ಅವರ ವರದಿಯಂತೆ, ಈಗ ತತಕ್ಷಣ ಲೋಕಸಭೆಗೆ ಚುನಾವಣೆ ನಡೆದರೆ ಎನ್’ಡಿಎ 362 ಹಾಗೂ ಕಾಂಗ್ರೆಸ್ ನೇತೃತ್ವದ ಯುಪಿಎ 97 ಸ್ಥಾನಗಳನ್ನು ಗಳಿಸಲಿದೆ ಎಂದಿದೆ.
ಬಿಜೆಪಿ ನೇತೃತ್ವದ ಎನ್’ಡಿಎ 362, ಕಾಂಗ್ರೆಸ್ ನೇತೃತ್ವದ ಯುಪಿಎ 97, ಪ್ರಾದೇಶಿಕ ಹಾಗೂ ಪಕ್ಷೇತರ ಅಭ್ಯರ್ಥಿಗಳು 84 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎನ್ನಲಾಗಿದೆ.
ಜುಲೈ 11 ರಿಂದ 24ರ ಅವಧಿಯಲ್ಲಿ ದೇಶದ 543 ಲೋಕಸಭಾ ಸ್ಥಾನಗಳ ಪೈಕಿ 113 ರಲ್ಲಿ 34,000 ಜನರನ್ನು ಸಂದರ್ಶಿಸಿ ಸಮೀಕ್ಷೆ ವರದಿ ತಯಾರಿಸಲಾಗಿದೆ.
ಕರ್ನಾಟಕದ ಪರಿಸ್ಥಿತಿಯೇನು?
ಇನ್ನು, ಸಮೀಕ್ಷಾ ವರದಿಯಂತೆ ಕರ್ನಾಟಕದಲ್ಲಿ ಬಿಜೆಪಿ 23, ಕಾಂಗ್ರೆಸ್ 3 ಹಾಗೂ ಜೆಡಿಎಸ್ 1 ಸ್ಥಾನಗಳಲ್ಲಿ ಜಯ ಗಳಿಸಲಿದೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post