ಕಲ್ಪ ಮೀಡಿಯಾ ಹೌಸ್
ನವದೆಹಲಿ: ದೇಶದಲ್ಲಿ ಇಂದು ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ 499 ಜನ ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದು, 38,164 ಜನರಿಗೆ ಕೊರೋನಾ ದೃಢಪಟ್ಟಿದೆ ಎನ್ನಲಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಸಚಿವಾಲಯದ ಮಾಹಿತಿ ಅನುಗುಣವಾಗಿ ಸೋಮವಾರದ ಅಂಕಿ-ಅಂಶದೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,11,44,229ಕ್ಕೆ ತಲುಪಿದ್ದು, ಸಾವಿನ 4,14,108ಕ್ಕೆ ಏರಿಕೆಯಾಗಿದೆ. ಗುಣಮುಖವಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಪ್ರಸ್ತುತ ಸಕ್ರಿಯ ಸೋಂಕಿತರ ಸಂಖ್ಯೆ 4,21,665ಕ್ಕೆ ಕುಸಿದಿದೆ ಎಂದು ತಿಳಿದುಬಂದಿದೆ.

ಈವರೆಗೂ ಕೊರೋನಾದಿಂದ ಚೇತರಿಸಿಕೊಂಡವರ ಸಂಖ್ಯೆ 3,03,08,456ಕ್ಕೆ ತಲುಪಿದ್ದು, ಕಳೆದ 24 ಗಂಟೆಗಳಲ್ಲಿ 38,660 ಮಂದಿ ಗುಣಮುಖರಾಗಿದ್ದಾರೆ. ಇನ್ನು ಭಾರತದಲ್ಲಿ ಭಾನುವಾರ ಒಂದೇ ದಿನ 14,63,593 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇಲ್ಲಿಯವರೆಗೆ ಒಟ್ಟು 44,54,22,256 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರದ ಮಾಹಿತಿ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 40.64 ಕೋಟಿ ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















