ಕಲ್ಪ ಮೀಡಿಯಾ ಹೌಸ್
ನವದೆಹಲಿ: ಕಳೆದ ಕೆಲವು ತಿಂಗಳಿನಿಂದ ಭಾರತದಲ್ಲಿ ತೀವ್ರ ಸ್ವರೂಪ ಪಡೆದಿದ್ದ ಕೊರೋನಾ ಪ್ರಸ್ತುತ ಕೊಂಚ ಇಳಿಮುಖ ಕಾಣುತ್ತಿದೆ. ಇಂದು ಬೆಳಗ್ಗೆ 8 ಗಂಟೆ ಹೊತ್ತಿಗೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 507 ಮಂದಿ ಕೊರೋನಾದಿಂದಾಗಿ ಸಾವನ್ನಪ್ಪಿದ್ದು, 41,383 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿರುವ ಮಾಹಿತಿ ಅನ್ವಯ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,12,57,720ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,18,987ಕ್ಕೆ ಏರಿಕೆಯಾಗಿದೆ ಎಂದು ತಿಳಿಸಲಾಗಿದೆ.
ಸಕ್ರಿಯ ಸೋಂಕಿತರ ಸಂಖ್ಯೆ ಇಂದು 4,09,394ರಷ್ಟಾಗಿದ್ದು, ಗುಣಮುಖವಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 38,652 ಮಂದಿ ಗುಣಮುಖರಾಗಿದ್ದಾರೆ. ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,04,29,339ಕ್ಕೆ ತಲುಪಿದೆ.
ಇನ್ನು ದೇಶದಲ್ಲಿ ಒಂದೇ ದಿನದಲ್ಲಿ 17,18,439 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 45,09,11,712 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post