ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೇಶದಾದ್ಯಂತ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಐದು ರಾಜ್ಯಗಳಲ್ಲಿ ಜ.31ರವರೆಗೂ ಯಾವುದೇ ರೀತಿಯ ಬೃಹತ್ ರ್‍ಯಾಲಿಗಳನ್ನು ನಡೆಸುವಂತಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸೂಚಿಸಿದರು.
ಈ ನಡುವೆಯೇ ಮೊದಲ ಹಾಗೂ ಎರಡನೆಯ ಹಂತದ ಮತದಾನ ನಡೆಯಲಿರುವ ಕ್ಷೇತ್ರಗಳಿಗೆ ಕೊಂಚ ವಿನಾಯ್ತಿ ನೀಡಿದ್ದು, 500 ಜನಕ್ಕೂ ಅಧಿಕ ಸಂಖ್ಯೆಯಲ್ಲಿ ಜನ ಸೇರಿಸದೇ ಸಭೆ ನಡೆಸಲು ಅನುಮತಿ ನೀಡಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕಾರ್ಯದರ್ಶಿ, ಗೋವಾ, ಮಣಿಪುರ, ಪಂಜಾಬ್, ಉತ್ತರಾಖಂಡ್ ಹಾಗೂ ಉತ್ತರ ಪ್ರದೇಶದ ಮುಖ್ಯ ಕಾರ್ಯರ್ಶಿಗಳೊಂದಿಗೆ ಸಭೆ ನಡೆಸಿದ ನಂತರ ಮುಖ್ಯ ಚುನಾವಣಾಧಿಕಾರಿಗಳು ಮಾತನಾಡಿದ್ದು, ಸಾರ್ವಜನಿಕರ ಹಿತದೃಷ್ಠಿಯಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಎಲ್ಲ ಅಭ್ಯರ್ಥಿಗಳು ಕಡ್ಢಾಯವಾಗಿ ನಿಯಮಾವಳಿಗಳನ್ನು ಪಾಲಿಸಬೇಕು ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post