ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಕೋವಿಡ್ 19 Covid-19 ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ. ಇಲ್ಲವೇ, ಭಾರತ್ ಜೋಡೋ ಯಾತ್ರೆಯನ್ನು ತತಕ್ಷಣವೇ ನಿಲ್ಲಿಸಿ ಎಂದು ರಾಹುಲ್ ಗಾಂಧಿ Rahul Gandhi ಹಾಗೂ ಕಾಂಗ್ರೆಸ್’ಗೆ ಕೇಂದ್ರ ಸರ್ಕಾರ ಖಡಕ್ ಸೂಚನೆ ನೀಡಿದೆ.
ಈ ಕುರಿತಂತೆ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಮಾತನಾಡಿದ್ದು, ಚೀನಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಭಾರತದಲ್ಲಿನ ಸ್ಥಿತಿಗತಿ ಕುರಿತು ಚರ್ಚಿಸಿ ಈ ನಿರ್ಣಯಕ್ಕೆ ಬರಲಾಗಿದೆ ಎಂದಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರಿಗೆ ಪತ್ರ ಬರೆದು ಈ ಕುರಿತಂತೆ ಸೂಚನೆ ನೀಡಲಾಗಿದೆ. ಭಾರತ್ ಜೋಡೊ ಯಾತ್ರೆಯಲ್ಲಿ ಕೋವಿಡ್ ತಡೆ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಒಂದು ವೇಳೆ ಪಾಲನೆಯಾಗದಿದ್ದರೇ ಯಾತ್ರೆಯನ್ನು ನಿಲ್ಲಿಸುವುದು ಸೂಕ್ತ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ವಿಚಾರವನ್ನು ಗಮನದಲ್ಲಿ ಇಟ್ಟುಕೊಳ್ಳಿ ಎಂದು ಪತ್ರದಲ್ಲಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ.
Also read:
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post