ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಯಾವುದೇ ರೀತಿಯ ಇರಾದೆ ನನಗಿಲ್ಲ. ಬದಲಾಗಿ ರಾಜ್ಯ ರಾಜಕೀಯದಲ್ಲೇ ಉಳಿಯಲು ತೀರ್ಮಾನಿಸಿದ್ದೇನೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ HDKumaraswamy ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು PMNarendraModi ಭೇಟಿಯ ನಂತರ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಉದ್ದೇಶ ನನ್ನ ಮುಂದೆ ಇಲ್ಲ. ಮಾಧ್ಯಮಗಳಲ್ಲಿ ಈ ಬಗ್ಗೆ ಸುದ್ದಿ ಬರುತ್ತಿದೆ. ಅದು ನಮ್ಮ ಜನರು, ಕಾರ್ಯಕರ್ತರು ಹಾಗೆ ಭಾವನೆ ಮಾಡುವುದಕ್ಕೆ ಕಾರಣವಾಗಿದೆ. ನಾನೇನಿದ್ದರೂ ರಾಜ್ಯ ರಾಜಕಾರಣಕ್ಕೆ ಸೀಮಿತ. ನಾನು ಇಲ್ಲಿಯೇ ಇದ್ದರೆ ರಾಜ್ಯಕ್ಕೆ ಒಳ್ಳೆಯದು ಎನ್ನುವುದು ಅನೇಕ ಜನರ ಅಭಿಪ್ರಾಯ, ನನ್ನ ಅಭಿಪ್ರಾಯವೂ ಅದೇ ಆಗಿದೆ. ನಾನು ಕರ್ನಾಟಕದಲ್ಲೇ ಇರಲು ತೀರ್ಮಾನ ಮಾಡಿದ್ದೇನೆ ಎಂದರು.
ಕುಮಾರಸ್ವಾಮಿ ಅವರು ಸೆಂಟ್ರಲ್ ಮಿನಿಸ್ಟರ್ ಆಗ್ತಾರಾ? ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸಿದ ಕುಮಾರಸ್ವಾಮಿ ಅವರು, ಯಾರ ಹಣೆಯ ಮೇಲೆ ಏನ್ ಬರೆದಿದೆಯೋ ಅಂತ ಗೊತ್ತಿಲ್ಲಾ. ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಕಾದು ನೋಡೋಣ, ಮುಂದೆ ಏನೇನು ನಡೆಯುತ್ತೋ ಎಂದರು.
Also read: Three Criminal Justice Bills, Emphasizing a New Era of Justice in India: Amit Shah
ಕರ್ನಾಟಕದಲ್ಲಿ ರಾಜಕೀಯ ಪರಿಸ್ಥಿತಿ ಹಾಗೂ ಲೋಕಸಭೆ ಚುನಾವಣೆಯ ನಂತರ ರಾಜ್ಯ ಕಾಂಗ್ರೆಸ್ ಸರಕಾರ ಉರುಳುತ್ತಾ ಎನ್ನುವ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಕರ್ನಾಟದ ರಾಜಕೀಯದಲ್ಲಿ ಶಿಂಧೆಯೂ ಇದ್ದಾರೆ, ಅಜೀತ್ ಪರ್ವಾ ಸಹ ಇದ್ದಾರೆ. ಯಾರು ಮೊದಲು ಮುಂದೆ ಬರುತ್ತಾರೋ ಕಾದು ನೋಡಬೇಕು. ಸದ್ಯದ ಪರಿಸ್ಥಿತಿಯಲ್ಲಿ ಏನು ಬೇಕಾದರೂ ಆಗಬಹುದು ಎಂದು ಮಾರ್ಮಿಕವಾಗಿ ಉತ್ತರ ಕೊಟ್ಟರು.
ಪ್ರಧಾನಿಗಳ ಭೇಟಿ ಬಗ್ಗೆ ಹೆಚ್ಡಿಕೆ ಹರ್ಷ
ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇವೇಗೌಡರು, ನಾನು, ಪ್ರಜ್ವಲ್, ರೇವಣ್ಣ, ಬಾಲಕೃಷ್ಣ ಭೇಟಿ ಮಾಡಿದ್ದೆವು. ಪ್ರತ್ಯೇಕವಾಗಿ ಪ್ರಧಾನಿಗಳ ಜತೆ ದೇವೇಗೌಡರು ಮತ್ತು ನಾನು ಬಹಳಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡಿದೆವು. ಮೋದಿ ಅವರು ದೇವೇಗೌಡರ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಮೋದಿಯವರು ನಮ್ಮ ಕುಟುಂಬದ ಬಗ್ಗೆ ಇಟ್ಟಿರುವ ವಿಶ್ವಾಸ ಇವತ್ತಿಗೂ ಕಡಿಮೆಯಾಗಿಲ್ಲ. ನಾನು ರಾಜ್ಯದ ಮುಖ್ಯಮಂತ್ರಿ ಆಗಿz್ದÁಗ ಮೋದಿ ಅವರು ಹಲವಾರು ಉತ್ತಮ ಸಲಹೆಗಳನ್ನು ನೀಡಿದ್ದರು ಎಂದು ಸಂತಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ನಡೆ ಬಗ್ಗೆ ಕಟು ಟೀಕೆ
ಸಂಸತ್ ಭವನದಲ್ಲಿ ಯುವಕರು ಹೊಗೆ ಬಿಟ್ಟ ಪ್ರಕರಣವನ್ನೇ ದೊಡ್ಡದು ಮಾಡಿ ಕಾಂಗ್ರೆಸ್ ಪಕ್ಷ ಸಂಸತ್ ಕಲಾಪವನ್ನು ಹಾಳು ಮಾಡುತ್ತಿರುವುದು ಸರಿಯಲ್ಲ. ಈ ವಿಚಾರದಲ್ಲಿ ವಿಪಕ್ಷಗಳ ನಡೆ ಸರಿ ಇಲ್ಲ. ಖರ್ಗೆ, ಸಿದ್ದರಾಮಯ್ಯ ಅವರಿಗೆ ನಾನು ಕೇಳಬಯಸುತ್ತೇನೆ, ಸಂಸತ್ ಘಟನೆಯನ್ನೇ ಭದ್ರತಾ ವೈಫಲ್ಯ ಅನ್ನುವುದಾದರೆ ವಿಧಾನಸಭೆಯ ಅಧಿವೇಶನದ ವೇಳೆ ಒಬ್ಬ ವ್ಯಕ್ತಿ ಸದನದ ಒಳಕ್ಕೆ ಬಂದು ಒಂದೂವರೆ ಗಂಟೆ ಕಲಾಪದಲ್ಲಿ ಭಾಗಿಯಾಗಿದ್ದ. ಅದನ್ನು ಏನೆಂದು ಕರೆಯಬೇಕು ಎಂದು ತೀಕ್ಷö್ಣವಾಗಿ ಪ್ರಶ್ನಿಸಿದರು ಕುಮಾರಸ್ವಾಮಿ ಅವರು.
ಈ ವೈಫಲ್ಯದ ಬಗ್ಗೆ ಯಾಕೆ ಚರ್ಚೆ ಮಾಡುತ್ತಿಲ್ಲ ಕಾಂಗ್ರೆಸ್ಸಿಗರು? ಎಂದ ಕೇಳಿದ ಮಾಜಿ ಮುಖ್ಯಮಂತ್ರಿಗಳು; ಇದೇ ವಿಧಾನಸಭೆಯ ಕಳೆದ ಕಲಾಪದಲ್ಲಿ ಸಭಾಧ್ಯಕ್ಷರ ಮೇಲೆ ಪೇಪರ್ ಎಸೆದರು ಎಂದು ವಿಪಕ್ಷಗಳ ಶಾಸಕರನ್ನು ಸದನದಿಂದ ಹೊರ ಹಾಕಿದ್ದರು. ಅದನ್ನು ಏನೆಂದು ಕರೆಯುತ್ತಾರೆ? ಅದು ಯಾವ ರಾಜಕೀಯ? ಒಬ್ಬ ದಲಿತ ಉಪಾಧ್ಯಕ್ಷರು ಅಂಥ ಹೇಳಿ ಶಾಸಕರನ್ನು ಸದನದಿಂದ ಹೊರ ಹಾಕಿದ್ದರು ಕರ್ನಾಟಕದಲ್ಲಿ. ಇದರ ಬಗ್ಗೆ ಯಾಕೆ ಪ್ರಶ್ನೆ ಮಾಡುತ್ತಿಲ್ಲ ಖರ್ಗೆಯವರೇ ಎಂದರು.
(ವರದಿ: ಡಿ.ಎಲ್. ಹರೀಶ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post