ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ಶಹಬಾದ್ ಡೈರಿ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬಗ್ಗೆ ಬೆಳಕಿಗೆ ಬಂದಿದೆ.
ಈ ಘಟನೆ ಜೂನ್ 27ರಂದು ನಡೆದಿನಡೆದಿದೆ ಎನ್ನಲಾಗಿದ್ದು, ಪ್ರಸ್ತುತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಸಂತ್ರಸ್ತೆ ತನ್ನ ಗೆಳೆಯನ ಜೊತೆ ರಾತ್ರಿ ಸಮಯದಲ್ಲಿ ಪಾರ್ಕ್‍ನಲ್ಲಿ ಕುಳಿತು ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ಮೂವರು ಅನಾವಶ್ಯಕ ಮಾತಿನ ಚಕಮಕಿ ನಡೆಸಿ 16ರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ತೆರಳಿದ್ದಾರೆ. ಬಳಿಕೆ ಈ ಸಂಬಂಧ ದೆಹಲಿ ಪೊಲೀಸರಿಗೆ ಮಾಹಿತಿ ರವಾನೆಯಾದ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಂತ್ರಸ್ತ್ರೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
Also read: International Anti-Drug Consumption and Anti-Theft Trafficking Awareness Rally
ಪ್ರಕಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎನ್ನಲಾಗಿದೆ.











Discussion about this post