ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಚಂದ್ರಯಾನ 3 Chandrayaana 3 ಯಶಸ್ಸಿನ ಬಳಿಕ ಇಸ್ರೋದ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಆದಿತ್ಯ ಎಲ್-1 Adithya L-1 ಭೂಮಿಯ 5 ಕಕ್ಷೆಗಳ ಬದಲಿಸಿ ಇದೀಗ ಭೂಮಿಯಿಂದ ಹೊರಗೆ ಬಂದಿದೆ ಎಂದು ಇಸ್ರೋ ಮಾಹಿತಿ ನೀಡಿದೆ.
Aditya-L1 Mission:
The fourth Earth-bound maneuvre (EBN#4) is performed successfully.ISRO’s ground stations at Mauritius, Bengaluru, SDSC-SHAR and Port Blair tracked the satellite during this operation, while a transportable terminal currently stationed in the Fiji islands for… pic.twitter.com/cPfsF5GIk5
— ISRO (@isro) September 14, 2023
ಈ ಬಗ್ಗೆ ಇಸ್ರೋ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಭೂಮಿಯ ಕಕ್ಷೆಯಿಂದ ಹೊರಬಂದಿರುವ ಆದಿತ್ಯ ಎಲ್-1 ಭೂಮಿಯ ಸುತ್ತಲಿನ ದತ್ತಾಂಶಗಳ ಸಂಗ್ರಹ ಕಾರ್ಯವನ್ನು ಆರಂಭಿಸಿದೆ ಎಂದು ತಿಳಿಸಿದೆ.
ಸತತ 5ನೇ ಬಾರಿಗೆ ಪಥದಲ್ಲಿರುವ ನೌಕೆಯನ್ನು ಮತ್ತೊಂದು ಆಕಾಶಕಾಯ ಅಥವಾ ಬಾಹ್ಯಾಕಾಶದಲ್ಲಿರುವ ಸ್ಥಳಕ್ಕೆ ಯಶಸ್ವಿಯಾಗಿ ವರ್ಗಾಯಿಸಿದೆ. ಇದನ್ನು ಸುಮಾರು 110 ದಿನಗಳ ನಂತರ ವಿವಿಧ ಪ್ರಕ್ರಿಯೆಗಳ ಮೂಲಕ ಎಲ್1 ಸುತ್ತ ಕಕ್ಷೆಗೆ ಸೇರಿಸಲಾಗುತ್ತದೆ ಎಂದು ಹೇಳಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post