ಕಲ್ಪ ಮೀಡಿಯಾ ಹೌಸ್ | ನವದೆಹಲಿ |
2002ರ ಗುಜರಾತ್ ಗಲಭೆ Gujrat riots ಪ್ರಕರಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ PM Narendra Modi ಸೇರಿದಂತೆ ಹಲವರಿಗೆ ಕ್ಲೀನ್ ಚಿಟ್ ಸಿಕ್ಕಿದೆ.
ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದ್ದು, ಪ್ರಕರಣದಲ್ಲಿ ಪಿಎಂ ಮೋದಿ ಸೇರಿದಂತೆ ಇತರ 63 ಮಂದಿಗೆ ವಿಶೇಷ ತನಿಖಾ ತಂಡ ಈ ಹಿಂದೆ ಕ್ಲೀನ್ ಚಿಟ್ ನೀಡಿತ್ತು. ಅದನ್ನು ಪ್ರಶ್ನಿಸಿ ಜಾಕಿಯಾ ಜಾಫ್ರಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
ಹತ್ಯೆಯಾದ ಕಾಂಗ್ರೆಸ್ ನಾಯಕ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಅವರ ಮನವಿಯನ್ನು ವಜಾಗೊಳಿಸಿ, ಎಸ್ಐಟಿ ವರದಿಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.
Also read: ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸಿ ಶಿಕ್ಷಣಕ್ಕೆ ನೆರವಾಗುತ್ತಿರುವುದು ಶ್ಲಾಘನೀಯ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post