ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ರಾಜ್ಯ ಹೈಕೋರ್ಟ್‌ನಲ್ಲಿ ಹಿಜಾಬ್‌ಗೆ Hijab ಹಿನ್ನೆಡೆಯಾದ ಹಿನ್ನೆಲೆಯಲ್ಲಿ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ Supreme Court ಸಲ್ಲಿಸಿದ ಅರ್ಜಿಗಳ ತುರ್ತು ವಿಚಾರಣೆ ಸಾಧ್ಯವಿಲ್ಲ, ಹೋಳಿ ರಜೆ ಬಳಿಕ ಈ ಬಗ್ಗೆ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಹೇಳಿದ್ದಾರೆ
ಇಂದು ಕೋರ್ಟ್ ಕಲಾಪ ಆರಂಭಕ್ಕೂ ಮುನ್ನ ಹಿರಿಯ ವಕೀಲ ಸಂಜಯ್ ಹೆಗಡೆ ಹಿಜಬ್ ವಿವಾದ ಮೇಲ್ಮನವಿ ಅರ್ಜಿಗಳ ಸಲ್ಲಿಕೆಯ ಬಗ್ಗೆ ಪ್ರಸ್ತಾಪಿಸಿದರು. ಪರೀಕ್ಷೆಗಳು ಹತ್ತಿರವಾಗುತ್ತಿವೆ, ವಿದ್ಯಾರ್ಥಿನಿಯರು ತರಗತಿಗಳಿಗೆ ಹಾಜರಾಗಬೇಕಿದೆ ಹೀಗಾಗಿ ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾ.ಎನ್.ವಿ ರಮಣ, ತುರ್ತು ವಿಚಾರಣೆ ಸಾಧ್ಯವಿಲ್ಲ. ಸೂಕ್ತ ಸಮಯದಲ್ಲಿ ನಾವು ವಿಚಾರಣೆ ನಡೆಸಲಿದ್ದೇವೆ. ಹೋಳಿ ರಜೆಯ ಬಳಿಕ ವಿಚಾರಣೆಗೆ ವಿಷಯ ಪಟ್ಟಿ ಮಾಡಲಾಗುವುದು ಎಂದು ತಿಳಿಸಿದರು.

Also read: ಹಿಜಾಬ್‌ಗೆ ಅವಕಾಶ ಇಲ್ಲ ಎಂದರೆ ಶಿಕ್ಷಣ ಬೇಡ: ಇಂಟರ್‌ನಲ್ಸ್ ಧಿಕ್ಕರಿಸಿ ಹೊರ ನಡೆದ ವಿದ್ಯಾರ್ಥಿನಿಯರು
ಇದೇ ಸಂದರ್ಭದಲ್ಲಿ ವಕೀಲ ಸಂಜಯ್ ಹೆಗಡೆ ಮಧ್ಯಪ್ರವೇಶಿಸಿ ಸೋಮವಾರ ವಿಚಾರಣೆ ನಡೆಸುವಂತೆ ಮನವಿ ಮಾಡಿದರೂ ನ್ಯಾಯಪೀಠ ಸಮ್ಮತಿ ಸೂಚಿಸಲಿಲ್ಲ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















