ಕಲ್ಪ ಮೀಡಿಯಾ ಹೌಸ್
ನವದೆಹಲಿ: ದಕ್ಷಿಣ ಭಾರತದಲ್ಲಿ ಈ ವರ್ಷ ಸಾಮಾನ್ಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿದ್ದು, ನೈಋತ್ಯ ಮಾನ್ಸೂನ್ ಉತ್ತರ ಮತ್ತು ದಕ್ಷಿಣ ಭಾರತದಲ್ಲಿ ಸಾಮಾನ್ಯ ಮಳೆಯನ್ನು ತರಬಹುದು ಮಧ್ಯ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮತ್ತು ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಲಿದೆ ಎಂದಿದೆ.
ಇದು ದೀರ್ಘಾವಧಿಯ ಸರಾಸರಿ (ಎಲ್ಪಿಎ) ಯ ಶೇಕಡಾ 96-104ರ ನಡುವೆ ಇರಲಿದೆ. ನೈಋತ್ಯ ಮಾನ್ಸೂನ್ ಕಾಲಾವಧಿಯಲ್ಲಿ (ಜೂನ್ ನಿಂದ ಸೆಪ್ಟೆಂಬರ್) ಒಟ್ಟಾರೆ ದೇಶದಲ್ಲಿ ಸಾಮಾನ್ಯ ಮಳೆಯಾಗಬಹುದು. ದೇಶದಾದ್ಯಂತ ಮಾನ್ಸೂನ್ ಶೇಕಡಾ 101 ರಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post