ಕಲ್ಪ ಮೀಡಿಯಾ ಹೌಸ್
ನವದೆಹಲಿ: ಪ್ರಸ್ತುತ ಕೋವಿಡ್-19 ಪ್ರಕರಣಗಳು ದೇಶದಲ್ಲಿ ಇಳಿಮುಖವಾಗುತ್ತಿದ್ದರೂ, ಅನೇಕರು ಸೋಂಕಿಗೆ ಬಲಿಯಾಗುತ್ತಿರುವುದು ಸಾಮಾನ್ಯವಾಗಿದೆ. ಕೇರಳ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಕೊರೋನಾ 3ನೇ ಅಲೆ ಪ್ರಾರಂಭವಾಗುವ ಆತಂಕ ಮೂಡಿಸಿದೆ.
ಹಬ್ಬ-ಹರಿದಿನಗಳಲ್ಲಿ ಜನದಟ್ಟಣೆ ಹೆಚ್ಚಾಗದಂತೆ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲಾ ರಾಜ್ಯಗಳಿಗೆ ಈಗಾಗಲೇ ಸೂಚಿಸಿದ್ದು, ದೇಶದಾದ್ಯಂತ ಕೋವಿಡ್ ಪ್ರಕರಣಗಳ ಇಳಿಕೆಯ ಮಧ್ಯೆಯೇ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳ ಕಂಡಿದೆ ಎನ್ನಲಾಗಿದೆ.
ರಾಷ್ಟ್ರದ ಕೋವಿಡ್-19 ತುರ್ತು ಕಾರ್ಯತಂತ್ರವನ್ನು ರೂಪಿಸುವ ಕೆಲಸ ನಿರ್ವಹಿಸುತ್ತಿರುವ ಎಂಪವರ್ಡ್ ಗ್ರೂಪ್ -1ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಒಟ್ಟು ಸಕ್ರಿಯ ಕೋವಿಡ್ -19 ಪ್ರಕರಣಗಳಲ್ಲಿ ಮಕ್ಕಳ ಪಾಲು ಈ ವರ್ಷದ ಮಾರ್ಚ್‌ನಲ್ಲಿ ಶೇ. 2.80ರಿಂದ ಆಗಸ್ಟ್ ನಲ್ಲಿ ಶೇ.7.04ಕ್ಕೆ ಏರಿಕೆ ಕಂಡಿದೆ. ಇದರರ್ಥ ಪ್ರತಿ 100 ಸಕ್ರಿಯ ಕೋವಿಡ್ ಪ್ರಕರಣಗಳಲ್ಲಿ ಸುಮಾರು 7 ಮಕ್ಕಳು ಸೋಂಕಿಗೆ ತುತ್ತಾಗುತ್ತಿರುವುದು ಪೋಷಕರಲ್ಲಿ ಹೆಚ್ಚಿನ ಆಂತಕಕ್ಕೆ ಕಾರಣವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post