ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP) ಅಡಿಯಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಯೆಲ್ಲೋ ಅಲರ್ಟ್ ನಿಯಮಗಳೇನು?
ಯೆಲ್ಲೋ ಅಲರ್ಟ್ ಘೋಷಣೆಯು ರಾತ್ರಿ ಕರ್ಫ್ಯೂ, ಶಾಲೆಗಳು ಮತ್ತು ಕಾಲೇಜುಗಳನ್ನು ಬಂದ್ ಮಾಡುವುದು, ಸಮ-ಬೆಸ ಆಧಾರದ ಮೇಲೆ ಅನಿವಾರ್ಯವಲ್ಲದ ಅಂಗಡಿಗಳನ್ನು ತೆರೆಯುವುದು. ಮೆಟ್ರೋ ರೈಲುಗಳು ಮತ್ತು ಬಸ್‌ಗಳಲ್ಲಿ ಆಸನ ಸಾಮರ್ಥ್ಯದ ಅರ್ಧದಷ್ಟು ಜನರು ಮಾತ್ರ ಪ್ರಯಾಣಿಸಬೇಕು ಎಂಬ ನಿರ್ಬಂಧಗಳನ್ನು ಒಳಗೊಂಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post