ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೇಶದ ಹೆಸರನ್ನು ಇಂಡಿಯಾದಿಂದ India ಭಾರತ್ Bharath ಎಂದು ಮರುನಾಮಕರಣ ಮಾಡುವ ಸಾಧ್ಯತೆಯಿದ್ದು, ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಸೆ.18ರಿಂದ 22ರವರೆಗೆ ಐದು ದಿನಗಳ ವಿಶೇಷ ಸಂಸತ್ ಅಧಿವೇಶನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಈ ಕಲಾಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ನಿರ್ಣಯವನ್ನು ಮಂಡಿಸಲಿದ್ದಾರೆ ಎಂದು ಹೇಳಲಾಗಿದೆ.

Also read: ಭದ್ರಾವತಿ | ಸಣ್ಣಪುಟ್ಟ ವ್ಯಾಜ್ಯಗಳನ್ನು ಸರಿಪಡಿಸಿಕೊಳ್ಳಿ, ಶಾಂತಿ ಕದಡಬೇಡಿ: ಎಸ್’ಪಿ ಮಿಥುನ್ ಕುಮಾರ್
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ನಿಟ್ಟಿನಲ್ಲಿ ವಿರೋಧ ಪಕ್ಷಗಳು ರಚಿಸಿಕೊಂಡಿರುವ ಮೈತ್ರಿಕೂಟಕ್ಕೆ INDIA ಎಂದು ಹೆಸರಿಟ್ಟುಕೊಂಡಿದ್ದಾರೆ. ಹೀಗಾಗಿ, ದೇಶದ ಹೆಸರನ್ನು ಭಾರತ್ ಎಂದು ಮರು ನಾಮಕರಣ ಮಾಡಲು ಪ್ರಧಾನಿ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.











Discussion about this post