ಕಲ್ಪ ಮೀಡಿಯಾ ಹೌಸ್
ನವದೆಹಲಿ: ಕೋವಿಡ್-19 ಆರ್ಭಟದಿಂದ ದೇಶವೇ ತತ್ತರಿಸಿ ಹೋಗಿದೆ. ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ದೇಶವನ್ನೇ ಲಾಕ್‌ಡೌನ್ ಮಾಡಿ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.
ಸೋಂಕು ಹೆಚ್ಚಲು ಕಾರಣವಾಗುವಂತಹ ಸಾರ್ವಜನಿಕ ಕಾರ್ಯಕ್ರಮಗಳಿಗೆ ನಿಷೇಧ ಹೇರುವ ಮೂಲಕ ಜನರು ಗುಂಪು ಸೇರುವುದನ್ನು ನಿಯಂತ್ರಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾರ್ವಜನಿಕರ ಹಿತಕ್ಕಾಗಿ ಲಾಕ್‌ಡೌನ್ ಜಾರಿಯ ಕುರಿತು ಕೂಲಂಕುಷವಾಗಿ ಪರಿಶೀಲನೆ ಡೆಸಬೇಕು. ಬಡವರಿಗೆ ಕಷ್ಟವಾಗುವ ಹಿನ್ನೆಲೆಯಿಂದ ಲಾಕ್‌ಡೌನ್ ಜಾರಿಗೂ ಮುನ್ನ ಆ ಸಮುದಾಯಗಳನ್ನು ಗಣನೆಗೆ ತೆಗೆದುಕೊಂಡು ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದೆ.
ಕೊರೋನಾ ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇಲ್ಲಿಯವರೆಗೆ ತೆಗೆದುಕೊಂಡಿರುವ ಕ್ರಮಗಳನ್ನು ಹಾಗೂ ಅನುಸರಿಸಿರುವ ಮಾರ್ಗಸೂಚಿಗಳ ಬಗ್ಗೆ ಸಂಪೂರ್ಣ ವಿವರವನ್ನು ನೀಡುವಂತೆ ಸುಪ್ರೀಂ ಕೋರ್ಟ್ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post